ಶನಿವಾರ, ಜನವರಿ 29, 2022
17 °C

ಹಿರಿಯೂರು: ಎಎಸ್ಐ ಗಣೇಶ್ ಕೃಷ್ಣ ಗೌಡ ಹೃದಯಾಘಾತದಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ಐಮಂಗಲ ಗ್ರಾಮದ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ನಿರತ ಎಎಸ್ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಗೋಕರ್ಣ ಪೋಲಿಸ್ ಠಾಣೆಯ ಎಎಸ್ಐ ಗಣೇಶ್ ಕೃಷ್ಣ ಗೌಡ (55) ಮೃತಪಟ್ಟವರು.

ಪೋಲಿಸ್ ತರಬೇತಿ ಶಾಲೆಯಲ್ಲಿ ಸುಮಾರು 370 ಎಎಸ್ಐಗಳಿಗೆ ಒಂದು ತಿಂಗಳ ಪುನರ್ ಮನನ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ನ. 29 ರಿಂದ ತರಬೇತಿ  ಕಾರ್ಯಾಗಾರ ಪ್ರಾರಂಭವಾಗಿತ್ತು .

ಗಣೇಶ್ ಕೃಷ್ಣ ಗೌಡ ಅವರಿಗೆ ಶುಕ್ರವಾರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸಿದೇ ಅವರು ಮೃತಪಟ್ಟಿದ್ದಾರೆ ಎಂದು ಐಮಂಗಲ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು