ಬುಧವಾರ, ಜೂನ್ 16, 2021
21 °C

ಹಿರಿಯೂರು: ಶಾಸಕಿ ಕೆ.ಪೂರ್ಣಿಮಾಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

k poornima srinivas

ಹಿರಿಯೂರು: ಶಾಸಕಿ ಕೆ.ಪೂರ್ಣಿಮಾ ಅವರಿಗೆ ಕೋವಿಡ್‌–19 ಇರುವುದು ಮಂಗಳವಾರ ದೃಢಪಟ್ಟಿದೆ. ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಕೊರೊನಾ ಸೋಂಕು ಅಂಟಿರುವುದು ಪರೀಕ್ಷೆಯಲ್ಲಿ ಖಚಿತವಾಗಿದೆ. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಮುನ್ನೆಚ್ಚರಿಕೆ ವಹಿಸುವಂತೆ ಫೇಸ್‌ಬುಕ್‌ನಲ್ಲಿ ಶಾಸಕಿ ಮನವಿ ಮಾಡಿದ್ದಾರೆ.

‘ಸೋಮವಾರ ಜ್ವರ ಕಾಣಿಸಿಕೊಂಡಿತ್ತು. ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಾಗ ಸೋಂಕು ಇರುವುದು ಖಚಿತವಾಗಿದೆ. ಗುಣಮುಖರಾಗುವವರೆಗೆ ಚಿಕಿತ್ಸೆ ಪಡೆಯುವ ಅಗತ್ಯವಿದೆ. ಮುಂದಿನ 20 ದಿನಗಳ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ’ ಎಂದು ಶಾಸಕಿ ಪೂರ್ಣಿಮಾ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು