ಹಿರಿಯೂರು: ‘ಕೆಲವರು ಮತದಾರರ ಸಮಗ್ರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕುರಿತು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದು, ಬಿಜೆಪಿ ಕಾರ್ಯಕರ್ತರು ಈ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ಒದಗಿಸಬೇಕು’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ಅಭಿನಂದನ್ ಸಲಹೆ ನೀಡಿದರು.

ಬಿಜೆಪಿ ಕಚೇರಿಯಲ್ಲಿ ಶನಿವಾರ ಮತದಾರರ ಪಟ್ಟಿ ಪರಿಷ್ಕರಣೆ, ಮೋದಿಯವರು 12 ವರ್ಷ ಅಧಿಕಾರವಧಿ ಪೂರೈಸಲಿರುವ ಪ್ರಯುಕ್ತ ನಡೆಸಬೇಕಿರುವ ಕಾರ್ಯಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

‘ಮತದಾರರ ಪಟ್ಟಿಯಿಂದ ದೇಶದ ಮೂಲ ನಿವಾಸಿಗಳನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ನುಸುಳುಕೋರರನ್ನು ಪತ್ತೆಹಚ್ಚಿ ಅವರನ್ನು ದೇಶದಿಂದ ಹೊರಹಾಕಬೇಕಿದೆ. ಇಲ್ಲವಾದರೆ ಅವರು ದೇಶದ ಭವಿಷ್ಯಕ್ಕೆ ಗಂಡಾಂತರ ಉಂಟು ಮಾಡುವ ಸಾಧ್ಯತೆ ಇದೆ. ನಮ್ಮ ಕಾರ್ಯಕರ್ತರು ಮನೆ–ಮನೆಗೆ ಹೋಗಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಮೋದಿಯವರ ಸಾಧನೆಗಳ ಬಗ್ಗೆ ಜನರಿಗೆ ವಿವರಿಸಬೇಕು’ ಎಂದು ಮನವಿ ಮಾಡಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಪ್ರತಿಯೊಂದು ಬೂತ್ ಮಟ್ಟದಲ್ಲಿ ವೀಕ್ಷಿಸಿ, ಅದರ ಮಾಹಿತಿಯನ್ನು ಸರಳ್ ಆ್ಯಪ್ನಲ್ಲಿ ಅಪ್ಲೋಡ್ ಮಾಡಬೇಕು’ ಎಂದು ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಾಧುರಿ ಗಿರೀಶ್ ಸಲಹೆ ನೀಡಿದರು.

‘ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಶ್ರಮಿಸಬೇಕು’ ಎಂದು ಹಿರಿಯ ಮುಖಂಡ ಎನ್.ಆರ್. ಲಕ್ಷ್ಮಿಕಾಂತ್ ತಿಳಿಸಿದರು.ವಿ. ವಿಶ್ವನಾಥ್, ಎಂ.ವಿ. ಹರ್ಷ, ಎಂ.ಎಸ್. ರಾಘವೇಂದ್ರ, ರಾಜೇಶ್ವರಿ ಗಿರೀಶ್, ಯೋಗೇಶ್, ನಿತಿನ್ ಗೌಡ, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-44-1207078363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.