ಹಿರಿಯೂರು: ‘ಡಿ. ಸುಧಾಕರ್ ನಿಧನದಿಂದ ತೆರವಾಗಿರುವ ಹಿರಿಯೂರು ಕ್ಷೇತ್ರದ ಉಪಚುನಾವಣೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದೇ ಆದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಬಿ. ಪಾಪಣ್ಣ ಅವರ ಹೆಸರು ಪರಿಗಣಿಸಬೇಕು’ ಎಂದು ಮುಖಂಡರು ಆಗ್ರಹಿಸಿದರು.

ತಾಲ್ಲೂಕಿನ ಜವನಗೊಂಡನಹಳ್ಳಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗೇಂದ್ರಪ್ಪ, ಪೂಜಾರಿ ಜೈರಾಮಯ್ಯ, ಕಲ್ಲೇಶ್, ಮಂಜುನಾಥ್, ಯಲ್ಲದಕೆರೆ ಧರ್ಮರಾಜ್, ಬೀರೇನಹಳ್ಳಿ ಪಾಂಡುರಂಗ, ಈಶ್ವರಪ್ಪ, ಎಲ್ಐಸಿ ಬಲರಾಮಯ್ಯ, ಕರಿಯಣ್ಣ, ತಿಪ್ಪಕ್ಕ, ಚಿತ್ತಮ್ಮ, ದೊಡ್ಡಕ್ಕ, ಆದಿರಾಳು ಲೋಕಣ್ಣ, ವಾಸುದೇವಪ್ಪ, ಪೂಜಾರಿ ಚಿತ್ತಪ್ಪ ಮೊದಲಾದವರು ಅಭಿಪ್ರಾಯ ಮಂಡಿಸಿದರು.

‘ಕ್ಷೇತ್ರದಲ್ಲಿ ಬಹುಸಂಖ್ಯಾತರಾಗಿರುವ ಕಾಡುಗೊಲ್ಲ ಜನಾಂಗಕ್ಕೆ ಸೇರಿರುವ ಪಾಪಣ್ಣ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದಾಗ ಜೆಜಿ ಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಎಲ್ಲ ಜಾತಿ– ಜನಾಂಗದವರೊಂದಿಗೆ ವಿಶ್ವಾಸ ಹೊಂದಿದ್ದು, ಅವರಿಗೆ ಟಿಕೆಟ್ ನೀಡಿದಲ್ಲಿ ಗೆಲುವು ಖಚಿತ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

‘ಕ್ಷೇತ್ರದ ಸಮಸ್ಯೆಗಳ ಸಮಗ್ರ ಅರಿವು ಪಾಪಣ್ಣ ಅವರಿಗೆ ಇದ್ದು, ಕಲ್ಲುವಳ್ಳಿ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ, ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ವಾಣಿವಿಲಾಸ ಅಣೆಕಟ್ಟೆಯಿಂದ ನೀರು ಹರಿಸುವುದು, ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಪ್ರಾಮಾಣಿಕ ಪ್ರಯತ್ನ, ರಸ್ತೆ ಮತ್ತು ಸಾರಿಗೆ ವ್ಯವಸ್ಥೆ ಸುಧಾರಣೆಗೆ ಅವರು ಶ್ರಮಿಸುವ ಭರವಸೆ ಇದೆ. ಆದ್ದರಿಂದ ಸ್ಥಳೀಯರಾದ ಪಾಪಣ್ಣ ಅವರಿಗೆ ಟಿಕೆಟ್ ನೀಡುವಂತೆ’ ಮುಖಂಡರು ಒತ್ತಾಯಿಸಿದರು.

‘ಉಪಚುನಾವಣೆಗೆ ಪಕ್ಷ ಟಿಕೆಟ್ ನೀಡಿದಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ. ಪಕ್ಷದಿಂದ ಬೇರೆ ಯಾರಿಗೇ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ’ ಎಂದು ಪಾಪಣ್ಣ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-44-2120551437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.