ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಸನ್ಮಾನ ಸ್ವೀಕರಿಸಲು ಮಗನೊಂದಿಗೆ ಹೋಗಿದ್ದ ಜಗನ್ಮಾತೆ ಊರಿಗೆ ಮರಳುತ್ತಿದ್ದರು. ಸಿದ್ದಲಿಂಗ ಸ್ವಾಮಿ ಅವರು ಕಾರು ಚಾಲನೆ ಮಾಡುತ್ತಿದ್ದರು. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿದ್ದಲಿಂಗಸ್ವಾಮಿ ಹಿರಿಯೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಜಗನ್ಮಾತೆ ಅವರು ಬೆಂಗಳೂರಿಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.