ಶನಿವಾರ, ಅಕ್ಟೋಬರ್ 31, 2020
20 °C

ಹಿರಿಯೂರು: ಕಾಂಗ್ರೆಸ್‌ ನಾಯಕರ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಿರಿಯೂರು: ‘ದೇಶ ಮತ್ತು ರಾಜ್ಯದ ಸ್ವಾಸ್ಥ್ಯವನ್ನು ಹಾಳು ಮಾಡಿರುವ ಬಿಜೆಪಿಗೆ ಪಾಠ ಕಲಿಸಲು ಎಲ್ಲ ವರ್ಗದ ಶಿಕ್ಷಕರು–ಪದವೀಧರರಿಗೆ ಒಂದು ಉತ್ತಮ ಅವಕಾಶ ದೊರೆತಿದೆ. ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್‌ಬಾಬು ಅವರನ್ನು ಬೆಂಬಲಿಸಬೇಕು’ ಎಂದು ಮಾಜಿ ಶಾಸಕ ಡಿ. ಸುಧಾಕರ್ ಮನವಿ ಮಾಡಿದರು.

ನಗರದ ತಮ್ಮ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕಾಂಗ್ರೆಸ್ ಪಕ್ಷ ಎಂದಿಗೂ ಶಿಕ್ಷಕರು, ಪದವೀಧರ ನಿರುದ್ಯೋಗಿಗಳ ಪರವಾಗಿ ಹೋರಾಟ ನಡೆಸುತ್ತ ಬಂದಿದೆ. ಶಿಕ್ಷಕರು–ಪದವೀಧರ ಕ್ಷೇತ್ರಗಳು ಬಿಜೆಪಿ ಭದ್ರಕೋಟೆಗಳು ಎಂಬ ಮಾತನ್ನು ಈ ಬಾರಿ ಮತದಾರರು ಹುಸಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಅಭ್ಯರ್ಥಿ ರಮೇಶ್‌ಬಾಬು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾಸುರೇಶ್ ಬಾಬು, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಶಾಸಕ ಟಿ. ರಘುಮೂರ್ತಿ, ಮಾಜಿ ಸಚಿವ ಶಿವಮೂರ್ತಿ ನಾಯ್ಕ, ಎಂ.ಕೆ. ತಾಜ್‌ಪೀರ್, ಜಿ.ಎಸ್. ಮಂಜುನಾಥ್ ಮಾತನಾಡಿದರು. ಮೈಲಾರಪ್ಪ, ಖಾದಿ ರಮೇಶ್, ಸಂಪತ್ ಕುಮಾರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.