ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಫೀವರ್ ಕ್ಲಿನಿಕ್ ಆರಂಭ

Last Updated 28 ಮಾರ್ಚ್ 2020, 12:22 IST
ಅಕ್ಷರ ಗಾತ್ರ

ಹಿರಿಯೂರು: ‘ಸರ್ಕಾರದ ನಿರ್ದೇಶನದ ಮೇರೆಗೆ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶನಿವಾರದಿಂದ ಫೀವರ್ ಕ್ಲಿನಿಕ್ ಆರಂಭವಾಗಿದ್ದು, ನಗರದಲ್ಲಿ ಯಾರಿಗಾದರೂ ಶೀತ, ನೆಗಡಿ, ಕೆಮ್ಮು, ಜ್ವರ ಕಂಡು ಬಂದಲ್ಲಿ ತಕ್ಷಣ ಕ್ಲಿನಿಕ್‌ನಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಮೋಹನ್ ಮನವಿ ಮಾಡಿದ್ದಾರೆ.

‘ಜ್ವರ ಕಾಣಿಸಿಕೊಳ್ಳುವುದು ಕೊರೊನಾ ಲಕ್ಷಣಗಳಲ್ಲಿ ಒಂದಾಗಿದ್ದು, ಫೀವರ್ ಕ್ಲಿನಿಕ್‌ನಲ್ಲಿ ಜ್ವರದ ಲಕ್ಷಣ ಆಧರಿಸಿ ಚಿಕಿತ್ಸೆ ನೀಡಲಾಗುತ್ತದೆ. ಜ್ವರದ ತೀವ್ರತೆ ಹೆಚ್ಚಿದ್ದಲ್ಲಿ ಐಸೋಲೇಷನ್‌ನಲ್ಲಿ ಇಟ್ಟುಕೊಳ್ಳುತ್ತೇವೆ. ಇಲ್ಲವಾದರೆ ಮನೆಗೆ ಕಳಿಸುತ್ತೇವೆ. ಫೀವರ್ ಕ್ಲಿನಿಕ್ ಆರಂಭಿಸಿರುವ ಕಾರಣ ರೋಗಿಗಳ ಮೇಲೆ ನಿಗಾ ಇಡಲು ಸಹಕಾರಿಯಾಗಲಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT