ಹಿರಿಯೂರು: ‘ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದು, ಜನರಿಗೆ ನೀರು ಕೊಡದ ಸ್ಥಳೀಯ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಆಗ್ರಹಿಸಿದರು.

ನೀರು ಶುದ್ಧೀಕರಣ ಘಟಕಗಳನ್ನು ದುರಸ್ತಿಗೊಳಿಸಿ ಸಮರ್ಪಕ ರೀತಿಯಲ್ಲಿ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಮಂಗಳವಾರ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದರು.

‘ತಾಲ್ಲೂಕಿನ ಸಾಕಷ್ಟು ಕಡೆ ಜನವರಿಯಿಂದಲೇ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ದಿಂಡಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ನೀರಿಗಾಗಿ ಎರಡು ತಿಂಗಳ ಹಿಂದೆಯೇ ಖಾಲಿ ಕೊಡಗಳನ್ನಿಟ್ಟು ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಆದರೂ ಜಿಲ್ಲಾಡಳಿತ ಈ ಬಗ್ಗೆ ಎಚ್ಚರ ವಹಿಸಿದಂತೆ ಕಾಣುತ್ತಿಲ್ಲ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಪಿಡಿಒಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪದ ಮೇಲೆ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

‘ಜಲಜೀವನ್ ಯೋಜನೆಯಡಿ ಅನೇಕ ಗ್ರಾಮಗಳಲ್ಲಿ ಕಳಪೆ ಕಾಮಗಾರಿ ನಡೆದಿದೆ. ಬಿಲ್ ಪಾವತಿಸುವ ಮೊದಲು ಪ್ರತಿ ಗ್ರಾಮದಲ್ಲೂ ರೈತರ ಸಮ್ಮುಖದಲ್ಲಿ ಕಾಮಗಾರಿಯ ಗುಣಮಟ್ಟದ ಪರಿಶೀಲನೆ ನಡೆಸಬೇಕು. ಕಳಪೆ ಕಾಮಗಾರಿ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು’ ಎಂದು ಆಗ್ರಹಿಸಿದರು.

‘2–3 ದಿನಗಳ ಒಳಗೆ ತಾಲ್ಲೂಕಿನಲ್ಲಿರುವ ಕುಡಿಯುವ ನೀರಿನ ಘಟಕಗಳ ಸಂಪೂರ್ಣ ಮಾಹಿತಿ ಒದಗಿಸುತ್ತೇನೆ. ಕೆಟ್ಟಿರುವ ಘಟಕಗಳನ್ನು ದುರಸ್ತಿ ಮಾಡಿಸಿ ನೀರು ಕೊಡುತ್ತೇವೆ’ ಎಂದು ಮನವಿ ಸ್ವೀಕರಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಮೋದ್ ಭರವಸೆ ನೀಡಿದರು.

‘ವಾರದೊಳಗೆ ನೀರಿನ ಘಟಕಗಳನ್ನು ದುರಸ್ತಿ ಮಾಡಿ ನೀರು ಕೊಡದೇ ಹೋದರೆ, ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಚಳವಳಿ ಹಮ್ಮಿಕೊಳ್ಳಲಾಗುವುದು’ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಳಗಟ್ಟೆ ವೆಂಕಟೇಶ್ ಎಚ್ಚರಿಸಿದರು.

ಮುಖಂಡರಾದ ಆಲೂರು ಸಿದ್ದರಾಮಣ್ಣ, ಸಣ್ಣ ಈರಪ್ಪ, ಅರಳಿಕೆರೆ ತಿಪ್ಪೇಸ್ವಾಮಿ, ಕನ್ಯಪ್ಪ, ಈರಣ್ಣ, ವೀರಣ್ಣಗೌಡ, ಆರ್.ಕೆ. ಗೌಡ, ಹೊಸಕೆರೆ ಜಯಣ್ಣ, ಜಗದೀಶ್, ತಿಮ್ಮಯ್ಯ, ಚಂದ್ರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-44-2008110700

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.