ಹಿರಿಯೂರು: ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕುರಿತು ಸರ್ಕಾರದ ಕಡೆಯಿಂದ ಯಾವುದೇ ಭರವಸೆ ಇಲ್ಲದ ಕಾರಣ, ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮಾರ್ಚ್ 2 ರಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಆಮರಣಾಂತ ಉಪವಾಸ ನಡೆಸಲು ನಗರದಲ್ಲಿ ಶನಿವಾರ ನಡೆದ ರೈತಸಂಘ ಮತ್ತು ಹಸಿರುಸೇನೆ ತಾಲ್ಲೂಕು ಘಟಕದ ಮಾಸಿಕ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

‘ಬಯಲು ಸೀಮೆಗೆ ನೀರು ಹರಿಸುವ ವಿಚಾರವಾಗಿ ಸರ್ಕಾರದ ಗಮನ ಸೆಳೆಯಲು ಧರಣಿ, ಪ್ರತಿಭಟನೆಗಳನ್ನು ನಡೆಸಿದ್ದೆವು. ಆದರೆ, ನಮ್ಮ ಹೋರಾಟದ ಬಿಸಿ ವಿಧಾನಸೌಧಕ್ಕೆ ತಟ್ಟಿಲ್ಲ. ಇದು ನಮ್ಮ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಅಂತಿಮವಾಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಮರಣಾಂತ ಉಪವಾಸ ನಡೆಸಲಿದ್ದೇವೆ’ ಎಂದು ಸಂಘದ ಜಿಲ್ಲಾ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಟಿ. ತಿಪ್ಪೇಸ್ವಾಮಿ ಎಚ್ಚರಿಸಿದರು.

ಬೇಡಿಕೆಗಳು; ಎರಡು ವರ್ಷದ ಹಿಂದೆ ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ ₹ 5300 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಗೊಳಿಸಬೇಕು. ರಾಜ್ಯ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಕನಿಷ್ಟ ₹ 5000 ಕೋಟಿ ಅನುದಾನವನ್ನು ಯೋಜನೆಗೆ ಮೀಸಲಿಡಬೇಕು. ಜೆ.ಜಿ. ಹಳ್ಳಿ ಹೋಬಳಿಯ ಗಾಯತ್ರಿ ಜಲಾಶಯ ಸೇರಿ 16 ಕೆರೆಗಳಿಗೆ ಸರ್ಕಾರ ಆದೇಶ ಹೊರಡಿಸಿರುವ ಪ್ರಕಾರ 0.307 ಟಿಎಂಸಿ ಅಡಿ ನೀರು ತುಂಬಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಟೆಂಡರ್ ಕರೆಯಬೇಕು. ಜಿಲ್ಲೆಯ ಎಲ್ಲಾ ಮಣ್ಣಿನ ಕೆರೆಗಳಿಗೂ ಭದ್ರಾ ಯೋಜನೆ ಮೂಲಕ ನೀರು ತುಂಬಿಸಬೇಕು ಎಂಬ ಬೇಡಿಕೆಗಳ ಬಗ್ಗೆ ಸರ್ಕಾರ 7 ದಿನಗಳ ಒಳಗೆ ಉತ್ತರಿಸಬೇಕು ಎಂದು ಷರತ್ತು ಹಾಕಿದ್ದೆವು. ಆದರೆ ಅಧಿಕಾರಿಗಳಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ನಈ ಬಗ್ಗೆ ಗಮನ ಹರಿಸದ ಕಾರಣ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದೇವೆ ಎಂದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಳಗಟ್ಟ ವೆಂಕಟೇಶ್, ಆಲೂರು ಸಿದ್ದರಾಮಣ್ಣ, ರಂಗಸ್ವಾಮಿ, ಅರಳೀಕೆರೆ ತಿಪ್ಪೇಸ್ವಾಮಿ, ಸಣ್ಣ ತಿಮ್ಮಣ್ಣ, ಬಳಗಟ್ಟ ತಿಮ್ಮಯ್ಯ, ಮಂಜಾನಾಯ್ಕ, ವೀರಣ್ಣಗೌಡ, ವಿರೂಪಾಕ್ಷ, ರಾಮಣ್ಣ, ಮೀಸೆ ಗೌಡಪ್ಪ, ಬಾಲಕೃಷ್ಣ, ಮಂಜುನಾಥ, ಶಿವಣ್ಣ, ಮೃತ್ಯುಂಜಯಪ್ಪ, ಜಯಣ್ಣ, ನಾರಾಯಣಪ್ಪ, ಎಂ.ಆರ್. ಈರಣ್ಣ, ಕೆ.ಟಿ. ರುದ್ರಮುನಿ, ಕನ್ಯಪ್ಪ, ಬಾಲಕೃಷ್ಣ, ಸಣ್ಣೀರಪ್ಪ, ನಿಂಗಪ್ಪ, ರಾಮಕೃಷ್ಣ, ಅಶ್ವತಪ್ಪ, ನಾಗರಾಜಪ್ಪ, ಚಂದ್ರಪ್ಪ, ವೆಂಕಟೇಶ್, ಗುಡಿಹಳ್ಳಿ ತಿಮ್ಮಯ್ಯ, ಗೋವಿಂದಪ್ಪ, ಕರಿಯಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.