ಹಿರಿಯೂರು: ತಾಲ್ಲೂಕಿನ ವಾಣಿವಿಲಾಸಪುರದಿಂದ ಕಕ್ಕಯ್ಯನಹಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿನ ತೋಟದ ಮನೆ ಹಾಗೂ ಭರಮಗಿರಿ ಸಮೀಪದ ತೋಟದ ಮನೆಯೊಂದರಲ್ಲಿ ಬುಧವಾರ ರಾತ್ರಿ ಕಳ್ಳತನವಾಗಿದೆ.

ಕಕ್ಕಯ್ಯನಹಟ್ಟಿ ರಸ್ತೆಯಲ್ಲಿರುವ ಎಸ್.ಎಸ್. ರಂಗಪ್ಪ ಅವರ ತೋಟದ ಮನೆಯ ಬೀಗ ಒಡೆದು ಬೆಲೆ ಬಾಳುವ ಕೃಷಿ ಉಪಕರಣಗಳನ್ನು ಕದ್ದೊಯ್ದಿದ್ದಾರೆ. ಮನೆಯಲ್ಲಿ ನಗದು, ಆಭರಣಗಳು ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಭರಮಗಿರಿ ಸಮೀಪದ ರೂಪ ಅವರ ಮನೆಯ ಬೀಗ ಒಡೆದು ಒಳ ನುಗ್ಗಿರುವ ಕಳ್ಳರು ಬೆಳ್ಳಿ–ಬಂಗಾರದ ಒಡವೆಗಳನ್ನು ಕಳವು ಮಾಡಿದ್ದಾರೆ.

ಒಂದೇ ದಿನ ಎರಡು ಮನೆಗಳಲ್ಲಿ ಕಳ್ಳತನವಾಗಿರುವ ಕಾರಣ ತೋಟದ ಮನೆಗಳಲ್ಲಿ ವಾಸವಾಗಿರುವವರು ಆತಂಕಗೊಂಡಿದ್ದಾರೆ. ರಾತ್ರಿ ಗಸ್ತು ಹೆಚ್ಚಿಸಬೇಕು, ವಾಣಿವಿಲಾಸಪುರಕ್ಕೆ ಪೂರ್ಣ ಪ್ರಮಾಣದ ಪೊಲೀಸ್ ಠಾಣೆ ಮಂಜೂರು ಮಾಡಬೇಕು ಎಂದು ರಂಗಪ್ಪ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-44-959955179

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.