ಹಿರಿಯೂರು: ‘ನಗರಸಭಾ ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೆ ಫ್ಲೆಕ್ಸ್, ಬ್ಯಾನರ್ ಕಟ್ಟಿದರೆ ಅಥವಾ ಹೋರ್ಡಿಂಗ್ ಹಾಕಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ನಗರಸಭೆ ಪೌರಾಯುಕ್ತ ಎ. ವಾಸೀಂ ಸಾರ್ವಜನಿಕರಿಗೆ, ಕಟ್ಟಡ ಮಾಲೀಕರಿಗೆ, ಬ್ಯಾನರ್ ಮತ್ತು ಬಂಟಿಂಗ್ಸ್ ತಯಾರಿಸುವ ಮತ್ತು ಕಟ್ಟುವವರಿಗೆ ಎಚ್ಚರಿಕೆ ನೀಡಿದ್ದಾರೆ.

‘ನಗರದ ಹಲವು ಕಡೆ ಕಟ್ಟಡಗಳ ಮೇಲೆ ನಗರಸಭೆ ಅನುಮತಿ ಇಲ್ಲದೆ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಅಳವಡಿಸಿರುವುದು ಕಂಡು ಬಂದಿದ್ದು, ಇದು ಕಾನೂನು ಬಾಹಿರವಾಗಿದೆ. ಗಾಳಿ ಮಳೆಯಿಂದ ಇವುಗಳು ಬಿದ್ದು, ವಾಹನ ಸಂಚಾರಕ್ಕೆ, ವಾಹನ ಸವಾರರಿಗೆ, ಸಾರ್ವಜನಿಕರಿಗೆ ಅಥವಾ ಯಾವುದೇ ರೀತಿಯ ಆಸ್ತಿಗಳಿಗೆ ಹಾನಿ ಸಂಭವಿಸಿದಲ್ಲಿ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ಕಟ್ಟಿದವರು ಜವಾಬ್ದಾರರಾಗುತ್ತಾರೆ’ ಎಂದು ಎಚ್ಚರಿಸಿದ್ದಾರೆ.

‘ಬ್ಯಾನರ್, ಹೋರ್ಡಿಂಗ್ ಕಟ್ಟುವ ಸ್ಥಳದ ಮಾಹಿತಿಯನ್ನು ನಗರಸಭೆಗೆ ನೀಡಿ ಅನುಮತಿ ಪಡೆದು ನಿಗದಿತ ಶುಲ್ಕ ಪಾವತಿಸಿ ಅಳವಡಿಸಬೇಕು. ಅನುಮತಿ ಪಡೆಯದ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಗಳನ್ನು ಪುರಸಭೆ ಕಾಯ್ದೆಯಂತೆ ತೆರವುಗೊಳಿಸಿ ಸಂಬಂಧಿಸಿದವರಿಂದ ದಂಡ ವಸೂಲಿ ಮಾಡುತ್ತೇವೆ’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-44-1896079652

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.