ಹಿರಿಯೂರು: ‘ನಗರದ ಪ್ರಧಾನ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆಯನ್ನು ದಿಂಡಾವರ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಹೈಟೆಕ್ ಕಟ್ಟಡಕ್ಕೆ ಸ್ಥಳಾಂತರಿಸುವ ಬದಲು ಅಲ್ಲಿಯೇ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ವೃದ್ಧ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಬೇಕು’ ಎಂದು ಆಗ್ರಹಿಸಿ ಮಂಗಳವಾರ ರೈತಸಂಘ ಮತ್ತು ಹಸಿರು ಸೇನೆಯ ತಾಲ್ಲುಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.

‘₹ 25 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹೈಟೆಕ್ ಆಸ್ಪತ್ರೆಯಲ್ಲಿ ಅಪಘಾತಗಳಲ್ಲಿ ಗಾಯಗೊಂಡವರಿಗೆ, ದೊಡ್ಡ ಕಾಯಿಲೆಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಿ. ಹಾಲಿ ಇರುವ ಆಸ್ಪತ್ರೆಯಿಂದ 6 ಕಿ.ಮೀ. ದೂರದಲ್ಲಿರುವ ನೂತನ ಆಸ್ಪತ್ರೆಗೆ ನೂರಾರು ರೂಪಾಯಿ ಆಟೊ ಬಾಡಿಗೆ ನೀಡಿ ಬಡವರು ಹೋಗಿ ಬರುವುದು ಕಷ್ಟ. ಇದರಿಂದ ನಗರದಲ್ಲಿರುವ ಖಾಸಗಿ ಆಸ್ಪತ್ರೆಯವರು ಹೆಚ್ಚಿನ ದರ ವಸೂಲಿ ಮಾಡಲು ದಾರಿ ಮಾಡಿಕೊಟ್ಟಂತೆ ಆಗುತ್ತದೆ. ಹಾಗಾಗಿ ಹಳೆಯ ಆಸ್ಪತ್ರೆಯಲ್ಲೂ ಚಿಕಿತ್ಸೆ ಮುಂದುವರಿಸಬೇಕು’ ಎಂದು ಸಂಘದ ಗೌರವಾಧ್ಯಕ್ಷ ಆಲೂರು ಸಿದ್ದರಾಮಣ್ಣ ಒತ್ತಾಯಿಸಿದರು.

‘ಮಕ್ಕಳ ತಜ್ಞರು, ಚರ್ಮರೋಗ ತಜ್ಞರು, ಅರವಳಿಕೆ ತಜ್ಞರೇ ಇಲ್ಲವೆಂದ ಮೇಲೆ ಬಡ ರೋಗಿಗಳಿಗೆ ಇನ್ನೆಂತಹ ಚಿಕಿತ್ಸೆ ಸಿಗಲು ಸಾಧ್ಯ. ಸರ್ಕಾರ ಮೊದಲು ಖಾಲಿ ಇರುವ ಎಲ್ಲಾ ವೈದ್ಯ ಹುದ್ದೆಗಳನ್ನು ಭರ್ತಿ ಮಾಡಲಿ. ಆಸ್ಪತ್ರೆ ಆವರಣದಲ್ಲಿರುವ ಜನರಿಕ್ ಔಷಧಿ ಮಳಿಗೆಯನ್ನು ಸ್ಥಳಾಂತರಿಸುವ ನಿರ್ಧಾರವನ್ನು ಹಿಂದೆ ಪಡೆಯಲಿ’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಬಳಗಟ್ಟ ವೆಂಕಟೇಶ್, ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಶಿವಕುಮಾರ್, ಲಕ್ಷ್ಮಿಕಾಂತ್, ಆರ್.ಕೆ. ಗೌಡ, ತಿಪ್ಪೇಸ್ವಾಮಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-44-1452563619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.