ಹಿರಿಯೂರು: ನಗರದಲ್ಲಿರುವ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣವನ್ನು 24x7 ಕಾರ್ಯನಿರ್ವಹಿಸುವ ನಿಲ್ದಾಣವನ್ನಾಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಸೋಮವಾರ ಸಾರಿಗೆ ಮಂತ್ರಿ ರಾಮಲಿಂಗಾರೆಡ್ಡಿಯವರಿಗೆ ಮನವಿ ಸಲ್ಲಿಸಿದ್ದಾರೆ.

ಹಿರಿಯೂರು ಬಸ್ ನಿಲ್ದಾಣಕ್ಕೆ ನಿತ್ಯ ಸಾರಿಗೆ ಸಂಸ್ಥೆ ನಾಲ್ಕು ವಿಭಾಗಗಳಿಂದ ಸುಮಾರು 800 ಕ್ಕೂ ಹೆಚ್ಚು ಬಸ್ಸುಗಳು ನಿತ್ಯ ಬಂದು ಹೋಗುತ್ತವೆ. ಸರ್ಕಾರದ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದರೆ ರಾತ್ರಿ 7 ಗಂಟೆಯ ನಂತರ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ದಾವಣಗೆರೆ, ಬಳ್ಳಾರಿ ಜಿಲ್ಲೆಯ ಕಡೆ ಸಂಚರಿಸುವ ಬಸ್ಸುಗಳು ಹಿರಿಯೂರು ಬಸ್ ನಿಲ್ದಾಣದ ಒಳಗೆ ಪ್ರವೇಶಿಸದೆ ಬೈಪಾಸ್ ಮೂಲಕ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಬಸ್ಸುಗಳು ಹಿರಿಯೂರು ಬಸ್ ನಿಲ್ದಾಣಕ್ಕೆ ಬಂದು–ಹೋಗುವಂತೆ ಆದೇಶಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಇದಲ್ಲದೆ ಬಸ್ ನಿಲ್ದಾಣದಿಂದ ಗಾಂಧಿವೃತ್ತ, ಪ್ರವಾಸಿ ಮಂದಿರ ವೃತ್ತಗಳಿಗೆ ಪ್ರತ್ಯೇಕ ಹಂತಗಳೆಂದು ಪರಿಗಣಿಸಿ ಬಸ್ ನಿಲುಗಡೆ ಮಾಡಿಸಬೇಕು ಎಂದು ನಾನು ಮಾಡಿರುವ ಮನವಿಗೆ, ಸಾರಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ವಿಷಯದ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಡಿ.ಸುಧಾಕರ್ ಪತ್ರಕರ್ತರಿಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.