ಹಿರಿಯೂರು: ‘ಶಾಲೆಗೆ ದಾಖಲಾತಿ ಪಡೆಯಲು ಜನನ ಪ್ರಮಾಣ ಪತ್ರ ಬೇಕು. ಮರಣಾ ನಂತರ ಕೌಟುಂಬಿಕ ವ್ಯವಹಾರಗಳಿಗೆ ಮರಣ ಪ್ರಮಾಣ ಪತ್ರ ಬೇಕು ಎಂಬ ಕಾನೂನಿನ ಅರಿವು ಎಲ್ಲರಿಗೂ ಇರಬೇಕು’ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಆರ್.ರಂಗಸ್ವಾಮಿ ತಿಳಿಸಿದರು.

ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಗೇಟ್ ಸಮೀಪ ಇರುವ ಶಾಹಿ ಗಾರ್ಮೆಂಟ್ಸ್ ಆವರಣದಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಕಾರ್ಮಿಕರಿಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಅವರ ಶ್ರಮವೇ ದೇಶದ ಆರ್ಥಿಕತೆಯ ಬೆನ್ನೆಲುಬು. ಕಾರ್ಮಿಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಶೋಷಣೆಯಿಂದ ರಕ್ಷಿಸುವುದು ಕಾರ್ಮಿಕ ದಿನದ ಉದ್ದೇಶವಾಗಿದೆ’ ಎಂದು ಕಾನೂನು ಸಲಹೆಗಾರ ಟಿ.ಧ್ರುವಕುಮಾರ್ ಹೇಳಿದರು.

‘ಕಾರ್ಮಿಕರ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಸೌಲಭ್ಯಗಳನ್ನು ಜಾರಿಗೊಳಿಸಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ರಾಜ್ಯ ಕಾರ್ಮಿಕ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಈ. ಪರಮೇಶ್ ಸಲಹೆ ನೀಡಿದರು.

ಶಾಹಿ ಗಾರ್ಮೆಂಟ್ಸ್ ಸಹಾಯಕ ವ್ಯವಸ್ಥಾಪಕ ಎಂ.ಎ. ಮುರುಗನ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕಾರ್ಮಿಕ ನಿರೀಕ್ಷಕ ಡಿ. ರಾಜಣ್ಣ, ಹಿರಿಯ ವಕೀಲ ಡಿ. ಲಕ್ಷ್ಮಣಮೂರ್ತಿ ಹಾಗೂ ಗಾರ್ಮೆಂಟ್ಸ್ ಕಾರ್ಮಿಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-44-2091498617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.