ಹಿರಿಯೂರು: ‘ತಾಲ್ಲೂಕಿನ ಕಲ್ಲುವಳ್ಳಿ ಭಾಗದ ಜನರ ಹಲವು ದಶಕಗಳ ಬೇಡಿಕೆಯಾಗಿರುವ ಗಾಯತ್ರಿ ಅಣೆಕಟ್ಟೆ ಒಳಗೊಂಡು 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಬೆಂಗಳೂರಿನಲ್ಲಿ ಗುರುವಾರ ನಡೆದ ತಾಂತ್ರಿಕ ಮೌಲ್ಯಮಾಪನ ಸಮಿತಿ ಅನುಮೋದನೆ ನೀಡಿದೆ’ ಎಂದು ತಾಲ್ಲೂಕು ಶಿಕ್ಷಣ ಸುಧಾರಣಾ ಸಮಿತಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯ ಎ.ಎಂ.ಅಮೃತೇಶ್ವರ ಸ್ವಾಮಿ ತಿಳಿಸಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ಸತತ ಪ್ರಯತ್ನದ ಫಲವಾಗಿ ಜವನಗೊಂಡನಹಳ್ಳಿ ಹೋಬಳಿಯ 6 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 100 ಹಳ್ಳಿಗಳ 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 0.307 ಟಿಎಂಸಿ ಅಡಿ ನೀರನ್ನು ಜಲಸಂಪನ್ಮೂಲ ಇಲಾಖೆಯಿಂದ ಹಂಚಿಕೆ ಮಾಡಲಾಗಿತ್ತು. ಈ ಯೋಜನೆಗೆ ಸಣ್ಣ ನೀರಾವರಿ ಇಲಾಖೆ ಮುಖಾಂತರ ಕಾಮಗಾರಿ ಜಾರಿಗೊಳಿಸಲು ₹ 266.75 ಕೋಟಿ ವೆಚ್ಚದ ವಿಸ್ತೃತ ವರದಿ ತಯಾರಿಸಿ ಗುರುವಾರ ನಡೆದ ತಾಂತ್ರಿಕ ಸಮಿತಿ ಸಭೆಯ ಮುಂದೆ ಮಂಡಿಸಲಾಗಿತ್ತು. ವಿಸ್ತೃತ ವರದಿಗೆ ಸಮಿತಿ ಅನುಮೋದನೆ ನೀಡಿರುವ ಕಾರಣ ತಾಲ್ಲೂಕಿನಲ್ಲಿ ಅತ್ಯಂತ ಹಿಂದುಳಿದ ಕಲ್ಲುವಳ್ಳಿ ಭಾಗದ ರೈತರಿಗೆ ಜೀವಾಮೃತ ನೀಡಿದಂತಾಗಿದೆ’ ಎಂದು ಸುದ್ದಿಗಾರರಿಗೆ ಹೇಳಿದರು.

‘ಇಂತಹ ಶುಭ ಸುದ್ದಿ ಬಂದಿರುವ ಸಮಯದಲ್ಲಿ ಸಚಿವರು ಅನಾರೋಗ್ಯದ ಕಾರಣಕ್ಕೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಬೇಸರ ಮೂಡಿಸಿದೆ. ಸಚಿವ ಸುಧಾಕರ್ ಅವರು ಶೀಘ್ರ ಗುಣಮುಖರಾಗಿ ಬರಲಿ ಎಂದು ಕ್ಷೇತ್ರದ ಜನತೆ ನಿರಂತರವಾಗಿ ಪೂಜೆ– ಪ್ರಾರ್ಥನೆ ಸಲ್ಲಿಸಿದ್ದಾರೆ. ಸಚಿವರು ಆಸ್ಪತ್ರೆಯಿಂದ ಗುಣಮುಖರಾಗಿ ಬಂದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-44-584501334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.