ಹಿರಿಯೂರು: ಬಿಸಿಲಿನ ಧಗೆಯಿಂದ ತಾಲ್ಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾದ ಮಾವಿನ ಇಳುವರಿಯಲ್ಲಿ ತೀವ್ರ ಕುಸಿತ ಉಂಟಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮಾವು ಬೆಳೆಗಾರರ ಸಂಘದವರು ಈಚೆಗೆ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.

‘ಉಷ್ಣಾಂಶ ಏರಿಕೆ, ಕೂಲಿ, ರಸಗೊಬ್ಬರ ದರ, ನಿರ್ವಹಣೆ ವೆಚ್ಚ ಹೆಚ್ಚಳದಿಂದ ನೊಂದಿರುವ ಮಾವು ಬೆಳೆಗಾರರಿಗೆ ಇಳುವರಿ ಕುಸಿತ ದೊಡ್ಡ ಹೊಡೆತ ನೀಡಿದೆ. ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಶಿಫಾರಸಿನ ಮೇರೆಗೆ ತೋಟಗಾರಿಕೆ ಇಲಾಖೆಯು ನಷ್ಟದ ಅಂದಾಜು ಪರಿಶೀಲನೆಗೆ ಮುಂದಾಗಿದೆ. ಹಾಗಾಗಿ ತಾಲ್ಲೂಕಿನಲ್ಲಿ ಆಗಿರುವ ನಷ್ಟದ ಕುರಿತು ಸೂಕ್ತ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು’ ಎಂದು ಸಂಘದ ಅಧ್ಯಕ್ಷ ಎ. ಶಿವರಾಂ, ಕಾರ್ಯದರ್ಶಿ ಬಿ. ಶಿವಮೂರ್ತಿ ಹಾಗೂ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.