ಹಿರಿಯೂರು: ಕರ್ತವ್ಯಲೋಪ, ದುರ್ನಡತೆ ಆರೋಪದ ಮೇರೆಗೆ ತಾಲ್ಲೂಕಿನ ವಾಣಿವಿಲಾಸಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಾಮಾನ್ಯ ಕರ್ತವ್ಯಾಧಿಕಾರಿ ಡಾ.ಎಸ್. ಚಂದ್ರಮೌಳಿ ಅವರನ್ನು ಅಮಾನತುಗೊಳಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿಸ್ತು ಪ್ರಾಧಿಕಾರ ಮತ್ತು ಆಯುಕ್ತರಾದ ಗುರುದತ್ತ ಹೆಗಡೆ ಅವರು ಮೇ. 6 ರಂದು ಈ ಕುರಿತ ಆದೇಶ ಹೊರಡಿಸಿದ್ದಾರೆ.

‘ಡಾ.ಚಂದ್ರಮೌಳಿ ಅವರು ಹಗಲು–ರಾತ್ರಿ ಪಾನ ಮತ್ತರಾಗಿ, ಗುಟ್ಕಾ ಸೇವಿಸಿ ಕರ್ತವ್ಯಕ್ಕೆ ಬರುತ್ತಾರೆ. ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಲಿಖಿತ ದೂರು ನೀಡಿದ್ದರು. ಇದರ ಆಧಾರದಲ್ಲಿ ಅಮಾನತುಗೊಳಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

‘ಇಲಾಖಾ ವಿಚಾರಣೆ ಬಾಕಿ ಇರಿಸಿ, ಅಮಾನತಿನ ಅವಧಿಯಲ್ಲಿ ಜೀವನಾಂಶ ಭತ್ಯೆ ಪಡೆಯಲು ಅನುವಾಗುವಂತೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಸದರಿ ವೈದ್ಯರು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ’ ಎಂದು ಆದೇಶದಲ್ಲಿ ಷರತ್ತು ವಿಧಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-44-1617251613

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.