ಹಿರಿಯೂರು: ನಗರದ ಹರಿಶ್ಚಂದ್ರಘಾಟ್ ಬಡಾವಣೆಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಡನ್ ಬಿ.ವಿ. ಶ್ವೇತಾ ಅವರನ್ನು ಜ.17 ರಂದು ಸೇವೆಯಿಂದ ಅಮಾನತುಗೊಳಿಸಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿಯೂ ಆದ ಜಿಲಾನಿ ಎಚ್ ಮೊಕಾಶಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಶನಿವಾರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಊಟ–ಉಪಹಾರ ಒಳಗೊಂಡಂತೆ ವಿವಿಧ ಸಮಸ್ಯೆಗಳನ್ನು ವಿದ್ಯಾರ್ಥಿನಿಯರು ಸಚಿವರ ಗಮನಕ್ಕೆ ತಂದಿದ್ದರು. ಇದಕ್ಕೂ ಮೊದಲು ಇಲಾಖೆಯ ಜಿಲ್ಲಾ ಅಧಿಕಾರಿ ಹಾಸ್ಟೆಲ್ಗೆ ಭೇಟಿ ನೀಡಿ ಪರಿಶೀಲಿಸಿದ ಸಮಯದಲ್ಲಿ, ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವ್ಯವಸ್ಥೆಯನ್ನು ಸರಿಪಡಿಸಿಕೊಳ್ಳುವಂತೆ ಹಲವು ಬಾರಿ ಮೌಖಿಕವಾಗಿ ಸೂಚಿಸಿದ್ದರೂ, ಕ್ರಮ ವಹಿಸಿರಲಿಲ್ಲ. ನಾಗರಿಕ ಸೇವಾ ನಿಯಮಾವಳಿಗಳ ಪ್ರಕಾರ ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.