ಸೋಮವಾರ, ಜೂನ್ 21, 2021
30 °C

ಕೋವಿಡ್-19ನಿಂದ ಹಿರಿಯೂರಿನ ನಗರಸಭೆ ಸದಸ್ಯ ದಾದಾಪೀರ್ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Municipal Council member Dadapeer

ಚಿತ್ರದುರ್ಗ: ಕೋವಿಡ್-19ನಿಂದ ಬಳಲುತ್ತಿದ್ದ ಹಿರಿಯೂರಿನ ನಗರಸಭೆ ಸದಸ್ಯ ದಾದಾಪೀರ್ (40) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಗಿನ ಜಾವ ನಿಧನರಾದರು.

ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಆಗಸ್ಟ್ 7 ರಂದು ಇವರನ್ನು ಚಿತ್ರದುರ್ಗದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶನಿವಾರ ರಾತ್ರಿ ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ನಗರಸಭೆಯ 15ನೇ ವಾರ್ಡ್‌ನಿಂದ ಕಾಂಗ್ರೆಸ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ನಗರಸಭೆ ಸದಸ್ಯರಾಗಿದ್ದ ಅವರಿಗೆ ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಇವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ನಗರಸಭೆ ಕೌನ್ಸಿಲ್ ಅಸ್ತಿತ್ವಕ್ಕೆ ಬರುವ ಮೊದಲೇ ಇಲ್ಲಿನ ಇಬ್ಬರು ಸದಸ್ಯರು ಮೃತಪಟ್ಟಂತಾಗಿದೆ. ಎ. ಪಾಂಡುರಂಗ ಎಂಬುವರು ಜನವರಿ 14 ರಂದು ಕೇರಳದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು