ಹಿರಿಯೂರು: ‘ನಗರದಿಂದ 5 ಕಿ.ಮೀ. ದೂರದಲ್ಲಿ ₹ 25 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಹೈಟೆಕ್ ಆಸ್ಪತ್ರೆ ಕಟ್ಟಡ ಉದ್ಘಾಟನೆಗೆ ಸಿದ್ಧವಾಗಿದೆ. ಜೂನ್ 15ರ ಒಳಗೆ ಹಳೆಯ ಆಸ್ಪತ್ರೆಯನ್ನು ಸ್ಥಳಾಂತರಿಸುವಂತೆ ಈಚೆಗೆ ಚಿತ್ರದುರ್ಗದಲ್ಲಿ ನಡೆದ ಜಿಲ್ಲಾ ಆರೋಗ್ಯ ಸಮಿತಿ ಸಭೆಯಲ್ಲಿ ಸೂಚಿಸಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು.

‘ಹೆರಿಗೆ, ಲೇಬರ್ ವಾರ್ಡ್, ಸರ್ಜಿಕಲ್, ಎಕ್ಸರೇ ಒಳಗೊಂಡು ಎಲ್ಲ ಘಟಕಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುತ್ತದೆ. ಖನಿಜ ನಿಧಿಯಲ್ಲಿ ಸಂಚಾರಿ ಆರೋಗ್ಯ ಘಟಕದ ವಾಹನ ಖರೀದಿಸಲಾಗಿತ್ತು. ಸಿಬ್ಬಂದಿ ಇಲ್ಲದ ಕಾರಣಕ್ಕೆ ವಾಹನ ಮಾತ್ರ ಉಳಿದಿತ್ತು. ಇದನ್ನು ಹಳೆಯ ಆಸ್ಪತ್ರೆಯಿಂದ ನೂತನ ಆಸ್ಪತ್ರೆಗೆ ರೋಗಿಗಳನ್ನು ಕರೆದೊಯ್ದು ಮರಳಿ ಕರೆತರಲು, ಇಲ್ಲಿನ ಒಳ ರೋಗಿಗಳನ್ನು ಸ್ಥಳಾಂತರಿಸಲು ಬಳಸಲಾಗುತ್ತದೆ. ಪ್ರತಿ ಅರ್ಧ ಗಂಟೆಗೆ ಒಮ್ಮೆ ಈ ವಾಹನ ಎರಡೂ ಆಸ್ಪತ್ರೆಗಳ ನಡುವೆ ಸಂಚರಿಸುತ್ತದೆ. ಆಸ್ಪತ್ರೆ ಸ್ಥಳಾಂತರ ಮುಗಿದ ನಂತರ ಹಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಲ್ಲಿಸಲಾಗುವುದು’ ಎಂದರು.

‘ಸಾರ್ವಜನಿಕ ಆಸ್ಪತ್ರೆಗೆ 12 ವೈದ್ಯ ಹುದ್ದೆಗಳು ಮಂಜೂರಾಗಿದ್ದು, ಇದರಲ್ಲಿ ಅರವಳಿಕೆ ತಜ್ಞರು, ಚರ್ಮರೋಗ ಹಾಗೂ ಮಕ್ಕಳ ತಜ್ಞ ವೈದ್ಯರ ಹುದ್ದೆಗಳು ಖಾಲಿ ಇವೆ. ಸಿಬ್ಬಂದಿಯ ಕೊರತೆ ಇಲ್ಲ’ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಜಯರಾಂ ತಿಳಿಸಿದರು.

‘ನೂತನ ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ವೈದ್ಯರನ್ನು ನೇಮಿಸಬೇಕು. ರೋಗಿಗಳಿಗೆ ಹಳೆಯ ಆಸ್ಪತ್ರೆಯಿಂದ ಹೊಸ ಆಸ್ಪತ್ರೆಗೆ ಹೋಗಿ ಬರಲು ಉಚಿತವಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಹಳೆಯ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಮಕ್ಕಳ ಘಟಕ ಆರಂಭಿಸಬೇಕು. ಆಸ್ಪತ್ರೆ ಆವರಣದಲ್ಲಿರುವ ಜನರಿಕ್ ಔಷಧಿ ಮಳಿಗೆಯನ್ನು ಮುಚ್ಚಬಾರದು’ ಎಂದು ರೈತ ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಆಲೂರು ಸಿದ್ದರಾಮಣ್ಣ ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-44-242447814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.