ಹಿರಿಯೂರು: ತಾಲ್ಲೂಕಿನ ವಾಣಿವಿಲಾಸ ಅಣೆಕಟ್ಟೆಯ ನಾಲೆಯಲ್ಲಿ ಭಾನುವಾರ ಮಗನ ಕೈಹಿಡಿದು ಸೆಲ್ಫಿ ಕ್ಲಿಕ್ಕಿಸುವ ವೇಳೆ ತಂದೆಯ ಕಾಲು ಜಾರಿದ್ದು, ಮಗ ನೀರಿನಲ್ಲಿ ಕೊಚ್ಚಿ ಹೋಗಿ ಸಾವಿಗೀಡಾಗಿದ್ದಾನೆ.

ತಾಲ್ಲೂಕಿನ ಆದಿವಾಲ ಗ್ರಾಮದ ಜಾಫರ್ ಸಾದಿಕ್ ಅವರ ಪುತ್ರ ಸಮೀರ್ (4) ಮೃತಬಾಲಕ. ಪೈಂಟರ್ ಕೆಲಸ ಮಾಡುತ್ತಿದ್ದ ಜಾಫರ್ ಭಾನುವಾರ ರಜೆ ಇದ್ದ ಕಾರಣ ಮಗನೊಂದಿಗೆ ವಾಣಿವಿಲಾಸ ಜಲಾಶಯದ ನಾಲೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ನಾಲೆಯ ದಡದಲ್ಲಿ ಸೆಲ್ಫಿ ಕ್ಲಿಕ್ಕಿಸುವ ವೇಳೆ ತಂದೆಯ ಕಾಲು ಜಾರಿದ್ದರಿಂದ ಬಾಲಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಸಾದಿಕ್ಗೆ ಗಾಯಗಳಾಗಿವೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕ ಜಾರಿಬಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಶವವನ್ನು ಪತ್ತೆ ಮಾಡಿದ್ದಾರೆ. ಗಾಯಗೊಂಡಿರುವ ಸಾದಿಕ್ನನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-44-47897256

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.