ಶುಕ್ರವಾರ, ಡಿಸೆಂಬರ್ 2, 2022
19 °C

ಅಪಘಾತ: ಇಬ್ಬರು ಬೆಸ್ಕಾಂ ನೌಕರರ ಸಾವು

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು: ತಾಲ್ಲೂಕಿನ ಹರ್ತಿಕೋಟೆ ಸಮೀಪ ಭಾನುವಾರ ಸಂಭವಿಸಿದ ಅಪಘಾತದಲ್ಲಿ  ಬೆಸ್ಕಾಂನ ಇಬ್ಬರು ನೌಕರರು ಮೃತಪಟ್ಟಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಬಹದ್ದೂರ್ ಘಟ್ಟ ಗ್ರಾಮದ ಪ್ರದೀಪ್ ಕುಮಾರ್ (38) ಹಾಗೂ ಮೊಳಕಾಲ್ಮುರು ತಾಲ್ಲೂಕಿನ ಕರಿಬಸಪ್ಪ (25) ಮೃತಪಟ್ಟವರು. ಇವರು ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಬೆಸ್ಕಾಂ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ನೌಕರರಿಬ್ಬರು ಬೆಂಗಳೂರಿನಿಂದ ಬಿ.ಜಿ.ಕೆರೆಗೆ‌ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಹರ್ತಿಕೋಟೆ ಸಮೀಪದ ಹೆದ್ದಾರಿಯಲ್ಲಿ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪ್ರದೀಪ್ ಕುಮಾರ್ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದು, ನಾಲ್ಕು ತಿಂಗಳ ಮಗು ಇದೆ ಎಂದು ಐಮಂಗಲ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು