ಹಿರಿಯೂರು: ತಾಲ್ಲೂಕಿನ ವಾಲ್ಮೀಕಿ ನಾಯಕ ಸಮುದಾಯದ ಮುಖಂಡ ನಂಜಯ್ಯನ ಕೊಟ್ಟಿಗೆ ಬಡಾವಣೆಯ ಡಿಶ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಿರುವ ಹಿರಿಯೂರು ಗ್ರಾಮಾಂತರ ಠಾಣೆ ಎಸ್ಐ ಮಹೇಶ್ ಗೌಡ ಎಂಬುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಮಂಗಳವಾರ ನಗರದಲ್ಲಿ ಸಭೆ ನಡೆಸಿದ ವಾಲ್ಮೀಕಿ ಸಮುದಾಯದ ಮುಖಂಡರು ತೀರ್ಮಾನ ಕೈಗೊಂಡರು.

‘ಮಂಜುನಾಥ್ ಅವರ ಮೇಲೆ ಎಸ್ಐ ಹಲ್ಲೆ ನಡೆಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರು, ಹಿರಿಯೂರು ಉಪವಿಭಾಗದ ಡಿವೈಎಸ್ಪಿ ಅವರಿಗೆ ದೂರು ನೀಡಿದ್ದರೂ ಕ್ರಮ ಜರುಗಿಸಿಲ್ಲ. ಶುಕ್ರವಾರದ ಒಳಗೆ ಎಸ್ಐ ಅವರನ್ನು ಅಮಾನತ್ತು ಮಾಡಬೇಕು. ಅಥವಾ ಇಲ್ಲಿಂದ ವರ್ಗಾವಣೆ ಮಾಡಬೇಕು. ಇಲ್ಲವಾದರೆ ಫೆ. 21ರಂದು ವಾಲ್ಮೀಕಿ ಸಮುದಾಯದ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ತೀರ್ಮಾನಿಸಿದರು.

ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.