ಹಿರಿಯೂರು: ನೆಲಮಂಗಲ ತಾಲ್ಲೂಕಿನ ಹೆಗ್ಗುಂದದಲ್ಲಿರುವ ವನಕಲ್ಲು ಮಲ್ಲೇಶ್ವರ ಮಹಾ ಸಂಸ್ಥಾನ ಸುಕ್ಷೇತ್ರ ಮಠದಲ್ಲಿ 52ನೇ ವರ್ಷದ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ ಫೆ.28 ರಿಂದ ಮಾರ್ಚ್ 1ರ ವರೆಗೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಗೆ ಆಗಮಿಸಬೇಕು ಎಂದು ಬಸವ ರಮಾನಂದ ಸ್ವಾಮೀಜಿ ಮನವಿ ಮಾಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಜಾತ್ರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಭಕ್ತರ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.

ಜಾತ್ರಾ ಮಹೋತ್ಸವದ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸಂಸ್ಕೃತಿ ಉತ್ಸವ ಹಾಗೂ ಪುಸ್ತಕ ಬಿಡುಗಡೆ, ವನಕಲ್ಲು ಶ್ರೀ, ಸಿದ್ಧಯೋಗ ಶ್ರೀ, ಜಗಜ್ಯೋತಿ, ಶ್ರೀ ಬಾಲಗಂಗಾಧರನಾಥ ನಿರ್ಮಲ ಜ್ಯೋತಿ, ವಿಶ್ವಜ್ಯೋತಿ ಹಾಗೂ ಶರಣಶ್ರೀ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ಜಾನಪದ ಸಂಸ್ಕೃತಿ ಕುರಿತು ವಿಚಾರಗೋಷ್ಠಿ, ಬ್ರಹ್ಮ ರಥೋತ್ಸವ ನಡೆಸಲಾಗುವುದು. ಆಸ್ತಿಕರು, ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಸ್ವಾಮೀಜಿ ಕೋರಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಬಿ. ಪಾಪಣ್ಣ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ಅಭಿನಂದನ್, ನಗರಸಭೆ ಮಾಜಿ ಅಧ್ಯಕ್ಷೆ ಶಿವರಂಜನಿಯಾದವ್, ಕಾಡುಗೊಲ್ಲ ಸಮುದಾಯದ ಮುಖಂಡರಾದ ಗೋಪಿ ಯಾದವ್, ಚಿತ್ತಯ್ಯ, ರಂಗಸ್ವಾಮಿ, ನಾಗಣ್ಣ, ರಾಜಣ್ಣ, ನಾಗರಾಜ್, ಆಕಾಶ್, ಶಶಿ, ತಮ್ಮಣ್ಣ, ಗೋವಿಂದರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.