ಸೋಮವಾರ, ಜೂನ್ 14, 2021
22 °C

ಹಿರಿಯೂರು: ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಫಾರ್ಮಸಿಸ್ಟ್ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು (ಚಿತ್ರದುರ್ಗ): ಇಲ್ಲಿನ  ಸರ್ಕಾರಿ ಆಸ್ಪತ್ರೆಯಲ್ಲಿ  ಫಾರ್ಮಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ  ನಡೆಸುತಿದ್ದ ಖಾಸಗಿ ಕ್ಲಿನಿಕ್ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದೆ. ಸಾವಿರಾರು ರೂಪಾಯಿ ಮೌಲ್ಯದ ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಫಾರ್ಮಸಿಸ್ಟ್ ವಿವೇಕಾನಂದ ಎಂಬಾತ ತಾಲೂಕಿನ  ಜವನಗೊಂಡನಹಳ್ಳಿಯಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ. ಖಚಿತ ಮಾಹಿತಿ ಆಧರಿಸಿ ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ, ಸಿಪಿಐ ರಾಘವೇಂದ್ರ, ಟಿಎಚ್ಓ ಡಾ. ವೆಂಕಟೇಶ್  ನೇತೃತ್ವದ ತಂಡ  ದಾಳಿ ನಡೆಸಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಸರ್ಕಾರದಿಂದ ಬರುವ ಔಷಧಿ, ಇಂಜೆಕ್ಷನ್, ಮಾತ್ರೆಗಳನ್ನು ಆರೋಪಿ ದುರುಪಯೋಗ ಮಾಡಿಕೊಳ್ಳುತ್ತದ್ದನು. ಕ್ಲಿನಿಕ್ ಗೆ ಬರುತ್ತಿದ್ದ ರೋಗಿಗಳಿಗೆ ಮಾರಾಟ ಮಾಡಿ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದ ಎಂಬ ಆರೋಪ ಫಾರ್ಮಸಿಸ್ಟ್ ಮೇಲಿದೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು