ಹಿರಿಯೂರು: ನಗರದ ರೋಟರಿ ಸಭಾ ಭವನದಲ್ಲಿ ಜೂನ್ 3 ರಂದು ಬೆಳಿಗ್ಗೆ 11 ಗಂಟೆಗೆ ರೆಡ್ ಕ್ರಾಸ್ ಸಂಸ್ಥೆ ಹಾಗೂ ಬೆಂಗಳೂರಿನ ಲಯನ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಕಣ್ಣಿನ ಉಚಿತ ಪರೀಕ್ಷೆ ಮತ್ತು ಆಧುನಿಕ ಶಸ್ತ್ರ ಚಿಕಿತ್ಸೆ(ಐಒಎಲ್ ಮೂಲಕ ಅಳವಡಿಕೆ) ಶಿಬಿರ ಹಮ್ಮಿಕೊಳ್ಳಲಾಗಿದೆ.

ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ ನಡೆಸಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಶಸ್ತ್ರ ಚಿಕಿತ್ಸೆಯ ಅಗತ್ಯ ಕಂಡುಬಂದಲ್ಲಿ ಅದೇ ದಿನ ಬೆಂಗಳೂರು ಪಶ್ಚಿಮ ಲಯನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಉಚಿತವಾಗಿ ಶಸ್ತ್ರ ಚಿಕಿತ್ಸೆ, ಔಷಧೋಪಚಾರ ಮಾಡಿ, ಮೂರು ದಿನ ಆಸ್ಪತ್ರೆಯಲ್ಲಿ ಇಟ್ಟುಕೊಂಡು ಮರಳಿ ಹಿರಿಯೂರಿಗೆ ಕರೆತಂದು ಬಿಡಲಾಗುತ್ತದೆ. ಶಸ್ತ್ರ ಚಿಕಿತ್ಸೆ ನಂತರ ಅಗತ್ಯ ಇರುವ ಔಷಧಿ, ಕನ್ನಡಕವನ್ನು ಉಚಿತವಾಗಿ ನೀಡಲಾಗುತ್ತದೆ. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಂಘಟಕರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-44-1105307568

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.