ಗುರುವಾರ , ಸೆಪ್ಟೆಂಬರ್ 29, 2022
26 °C

ಮೈದುಂಬಿ ಹರಿಯುತ್ತಿರುವ ವೇದಾವತಿ: ಹಿರಿಯೂರಿನ ನದಿ ತೀರದ ಬಡಾವಣೆಗೆ ನುಗ್ಗಿದ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಹೊರಹರಿವು ಹೆಚ್ಚಿರುವುದರಿಂದ ವೇದಾವತಿ ಮೈದುಂಬಿ ಹರಿಯುತ್ತಿದ್ದು, ನದಿ ತೀರದ ಬಡಾವಣೆಗಳಿಗೆ ನೀರು ನುಗ್ಗಿದೆ.

ಸೋಮವಾರ ರಾತ್ರಿ ಭಾರಿ ಮಳೆಯಾಗಿದ್ದು, ಇತರ ಬಡಾವಣೆಗಳಿಗೂ ತೊಂದರೆ ಆಗಿದೆ. ವಾಣಿವಿಲಾಸ ಜಲಾಶಯದ ಎರಡು ನಾಲೆಗಳು ತುಂಬಿ ಹರಿಯುತ್ತಿವೆ. 

ನದಿ ತೀರದಲ್ಲಿದ್ದ ಸುಮಾರು 32 ಮನೆಗಳ ನಿವಾಸಿಗಳನ್ನು ತೆರವುಗೊಳಿಸಿ ಬನಶಂಕರಿ ದೇವಸ್ಥಾನ, ದರ್ಗಾದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರ ತೆರೆಯಲಾಗಿದೆ. ಸಂಜೆ ವೇಳೆಗೆ ವೇದಾವತಿ ನದಿ ನೀರಿನ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನದಿ ತೀರದ ನಿವಾಸಿಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಮುಂದುವರೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.