ಹಿರಿಯೂರು: ‘ನಮ್ಮ ತಂದೆ ಸುಧಾಕರ್ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಮಾಡಿಸಿರುವುದು ಕಣ್ಮುಂದೆ ಕಟ್ಟಿದಂತೆ ಇದೆ. ಕ್ಷೇತ್ರದ ಜನ ಆಶೀರ್ವದಿಸಿದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ನಾನು ಬದ್ಧನಿದ್ದೇನೆ’ ಎಂದು ಸುಹಾಸ್ ಸುಧಾಕರ್ ತಿಳಿಸಿದರು.

ಶನಿವಾರ ವಾಣಿವಿಲಾಸ ಅಣೆಕಟ್ಟೆಯ ನೀರು ಹರಿಸಿದ್ದರಿಂದ ತಾಲ್ಲೂಕಿನ ಅಂಬಲಗೆರೆ ಗ್ರಾಮದ ಕೆರೆ ಕೋಡಿ ಬಿದ್ದಿದ್ದು, ಭಾನುವಾರ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದರು.

ನಮ್ಮ ತಂದೆಯವರ ಅಭಿಮಾನಿಗಳು, ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಬಾಕಿ ಉಳಿದಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಇನ್ನೂ ಎರಡು ವರ್ಷ ಕಾಂಗ್ರೆಸ್ ಸರ್ಕಾರದ ಅವಧಿ ಇದ್ದು, ಜವನಗೊಂಡನಹಳ್ಳಿ, ಐಮಂಗಲ ಹೋಬಳಿ ಕೆರೆಗಳಿಗೆ ನೀರು ಹರಿಸುವುದು ಒಳಗೊಂಡಂತೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹೆಚ್ಚು ಒತ್ತು ಕೊಡಲಾಗುವುದು ಎಂದರು.

ಸ್ಥಳೀಯ ಮುಖಂಡರೊಂದಿಗೆ ಗ್ರಾಮದ ಲಕ್ಷ್ಮೀರಂಗನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-44-1704180740

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.