ಹಿರಿಯೂರು: ದಂಪತಿ ನಡುವಿನ ಮನಸ್ತಾಪ ವಿಕೋಪಕ್ಕೆ ತಿರುಗಿ ಪತ್ನಿಯ ಮೇಲೆ ಪತಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಹರ್ತಿಕೋಟೆ ಸಮೀಪದ ಚನ್ನಮ್ಮನಹಳ್ಳಿ ಲಂಬಾಣಿ ತಾಂಡಾದಲ್ಲಿ ಬುಧವಾರ ನಡೆದಿದೆ.

ಲಕ್ಷ್ಮೀದೇವಿ (35) ಹಲ್ಲೆಗೆ ಒಳಗಾಗಿರುವ ಮಹಿಳೆ. ತಿಪ್ಪೇಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಲಕ್ಷ್ಮೀದೇವಿ ಅವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ನಂತರ ಹೆಚ್ಚಿನ ಚಿಕಿತ್ಸೆಗೆಂದು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪ್ರಕರಣ ದಾಖಲು ಮಾಡಿಕೊಂಡಿರುವ ಐಮಂಗಲ ಠಾಣೆ ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ: ಚನ್ನಮ್ಮನಹಳ್ಳಿಯ ಲಕ್ಷ್ಮೀದೇವಿಯನ್ನು 9 ವರ್ಷಗಳ ಹಿಂದೆ ಚಳ್ಳಕೆರೆ ತಾಲ್ಲೂಕು ಗಂಜಿಗುಂಟೆ ಲಂಬಾಣಿಹಟ್ಟಿಯ ತಿಪ್ಪೇಸ್ವಾಮಿ ಎಂಬುವವರೊಂದಿಗೆ ಮದುವೆ ಮಾಡಿಸಲಾಗಿತ್ತು. ದಂಪತಿಗೆ ಒಂದು ಗಂಡು, ಒಂದು ಹೆಣ್ಣು ಮಗುವಿದ್ದು, ದಂಪತಿ ನಡುವೆ ಆಗಾಗ್ಗೆ ಮಾತಿನ ಚಕಮಕಿ ನಡೆಯುತ್ತಿತ್ತು.

‘ಗಂಡನ ವರ್ತನೆಯಿಂದ ಬೇಸತ್ತಿದ್ದ ಲಕ್ಷ್ಮೀದೇವಿ ಮೂರ್ನಾಲ್ಕು ದಿನದ ಹಿಂದೆ ತವರಿಗೆ ಬಂದಿದ್ದರು. ಪತ್ನಿಯನ್ನು ಮರಳಿ ತನ್ನ ಮನೆಗೆ ಕರೆದೊಯ್ಯಲು ಎರಡು ದಿನಗಳ ಹಿಂದೆ ತಿಪ್ಪೇಸ್ವಾಮಿ ಬಂದಿದ್ದ. ಗಂಡನ ಜೊತೆ ತಕ್ಷಣ ಹೋಗಲು ಪತ್ನಿ ಒಪ್ಪದ ಕಾರಣಕ್ಕೆ ಕೋಪಗೊಂಡು ಕೈಗೆ ಸಿಕ್ಕ ಮಚ್ಚಿನಿಂದ ತೀವ್ರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಎಎಸ್ಪಿ ಆರ್. ಶಿವಕುಮಾರ್, ಡಿವೈಎಸ್ಪಿ ಶಿವಕುಮಾರ್, ಇನ್ಸ್ಪೆಕ್ಟರ್ ಎನ್. ಗುಡ್ಡಪ್ಪ, ಎಸ್ಐ ಎಂ.ಟಿ. ದೀಪು ಭೇಟಿ ನೀಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-44-578925522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.