ಹೊಳಲ್ಕೆರೆ: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಯೂರಿಯಾ ಕೊರತೆ ಆಗದಂತೆ ಮೊದಲೇ ಗೊಬ್ಬರ ಸಂಗ್ರಹಿಸಿ ಇಟ್ಟುಕೊಳ್ಳಬೇಕು ಎಂದು ತಹಶೀಲ್ದಾರ್ ವಿಜಯ ಕುಮಾರ್ ತಿಳಿಸಿದರು.

ಪಟ್ಟಣದ ಮೈರಾಡ ಕೇಂದ್ರದಲ್ಲಿ ನಡೆದ ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನ ರೈತರಿಗೆ ಎಷ್ಟು ಯೂರಿಯಾ ಅಗತ್ಯವಿದೆ ಎಂಬ ಅಂಕಿ, ಅಂಶ ಕೃಷಿ ಇಲಾಖೆಯಲ್ಲಿ ಇರುತ್ತದೆ. ಅದರಂತೆ ರೈತರಿಗೆ ಬೇಕಾಗುವಷ್ಟು ಯೂರಿಯಾ ಮತ್ತಿತರ ರಸಗೊಬ್ಬರಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಕಾಳಸಂತೆಯಲ್ಲಿ ಹೆಚ್ಚು ದರಕ್ಕೆ ಮಾರಾಟ ಮಾಡಿದರೆ ಅಂಗಡಿಯ ಪರವಾನಗಿ ರದ್ದು ಮಾಡಲಾಗುವುದು. ಕಳಪೆ ಗೊಬ್ಬರ ಮಾರಾಟ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ರೈತರಿಗೆ ಎಫ್ಐಡಿ ಮೂಲಕ ಸರ್ಕಾರದ ಸೌಲಭ್ಯಗಳನ್ನು ನೀಡಲಾಗುತ್ತದೆ. ಕೆ– ಕಿಸಾನ್ ಆ್ಯಪ್ ಮೂಲಕ ಯೂರಿಯಾ ಗೊಬ್ಬರ ವಿತರಣೆ ಮಾಡಬೇಕು. ಋತುಮಾನಕ್ಕೆ ಅನುಗುಣವಾಗಿ ರಸಗೊಬ್ಬರಗಳನ್ನು ದಾಸ್ತಾನು ಮಾಡಿ ನಿಗಧಿತ ಸಮಯಕ್ಕೆ ಸರಿಯಾಗಿ ರೈತರಿಗೆ ವಿತರಿಸಬೇಕು. ಪಟ್ಟಣದಲ್ಲಿ ರಸಗೊಬ್ಬರ ಮಾರಾಟಗಾರರ ಜತೆಗೆ ಸೊಸೈಟಿ ಮತ್ತು ಎಫ್ಪಿಒಗಳು ಕೂಡ ಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ನ್ಯಾನೋ ಯೂರಿಯಾ, ನ್ಯಾನೋ ಡಿಎಪಿ ಬಳಸಲು ರೈತರಿಗೆ ಪ್ರೇರೇಪಿಸಬೇಕು. ರೈತರಿಗೆ ಗುಣಮಟ್ಟದ ರಸಗೊಬ್ಬರ ಮಾರಾಟ ಮಾಡಬೇಕು’ ಎಂದು ಸಹಾಯಕ ಕೃಷಿ ನಿರ್ದೇಶಕ ಚಂದ್ರಕುಮಾರ್ ತಿಳಿಸಿದರು.

ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ ಮಾತನಾಡಿ, ‘ರೈತರು ಪ್ರತಿ ವರ್ಷ ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಳೆಗಳಿಗೆ ಕಾಡುವ ಕೀಟರೋಗ ಬಾಧೆಯಿಂದ ಬೆಳೆ ಕಳೆದುಕೊಳ್ಳುತ್ತಿದ್ದಾರೆ. ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಕೇವಲ ಪರಿಕರ ಮಾರಾಟ ಮಾಡುವುದರ ಜತೆಗೆ ಮಾರ್ಗದರ್ಶನವನ್ನೂ ನೀಡಬೇಕು. ಮಣ್ಣು, ನೀರು ಪರೀಕ್ಷೆ ಆಧಾರದ ಮೇಲೆ ರಸಗೊಬ್ಬರ ಬಳಸಲು ಸೂಚಿಸಬೇಕು. ರೈತರಿಗೆ ನಿಖರವಾದ ಬೆಲೆಗೆ ಬೀಜ, ಗೊಬ್ಬರ ಮಾರಾಟ ಮಾಡಬೇಕು’ ಎಂದು ತಿಳಿಸಿದರು.

ಕೃಷಿ ಪರಿಕರ ಮಾರಾಟಗಾರರ ಸಂಘಧ ಅಧ್ಯಕ್ಷ ವೆಂಕಟೇಶ್, ಮಲ್ಲನಗೌಡ, ತಾಂತ್ರಿಕ ಸಹಾಯಕ ಗೋಪಿಕೃಷ್ಣ, ಕೃಷಿ ಅಧಿಕಾರಿ ವಿಕಾಸ್, ಆಶಾ, ಪ್ರದೀಪ ಕುಮಾರ್, ವೆಂಕಟೇಶಪ್ಪ, ಮಂಜುನಾಥ ಮೇಗಳಮನಿ, ಆತ್ಮ ಯೋಜನೆಯ ಸುರೇಶ, ರೂಪಾ, ಉಜ್ಮಾ ಹಾಗೂ ಕೃಷಿ ಪರಿಕರ ಮಾರಾಟಗಾರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-44-1677306532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.