ಹೊಳಲ್ಕೆರೆ: ‘ತಾಲ್ಲೂಕಿನ ತಾಳಿಕಟ್ಟೆ ಕಾವಲು, ಗುಂಡೇರಿ ಕಾವಲು, ಅಂಜಿನಾಪುರ ಕಾವಲು ಜಮೀನುಗಳ ಗೇಣಿದಾರರಿಗೆ ಶೀಘ್ರವೇ ಸಾಗುವಳಿ ಪತ್ರ ವಿತರಿಸಲಾಗುವುದು’ ಎಂದು ಶಾಸಕ ಎಂ.ಚಂದ್ರಪ್ಪ ಭರವಸೆ ನೀಡಿದರು.

ತಾಳಿಕಟ್ಟೆ ಕಾವಲಿನಿಂದ ರಣದಮ್ಮ ದೇವಸ್ಥಾನದವರೆಗೆ ₹1 ಕೋಟಿ ವೆಚ್ಚದಲ್ಲಿ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

‘2023ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ತಾಲ್ಲೂಕಿನ ಅಮೃತ್ ಮಹಲ್ ಕಾವಲುಗಳು ಇರುವ ಮೂರು ಗ್ರಾಮಗಳ ಜಮೀನನ್ನು ರೈತರ ಹೆಸರಿಗೆ ಮಾಡಿಕೊಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಒತ್ತಡ ತಂದಿದ್ದೆ. ಆಗ ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿತ್ತು. ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗಳ ಕೆಲವು ತಾಂತ್ರಿಕ ಕಾರಣಗಳಿಂದ ಸಾಗುವಳಿ ಚೀಟಿ ವಿತರಿಸುವುದು ವಿಳಂಬವಾಗಿದೆ. ಶೀಘ್ರವೇ ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ ರೈತರ ಹೆಸರಿಗೆ ಜಮೀನು ಮಾಡಿಕೊಡಲಾಗುವುದು. ರೈತರ ಹೆಸರಿಗೆ ಪಹಣಿ ಬಂದರೆ ಸರ್ಕಾರದ ಸೌಲಭ್ಯ ಪಡೆಯಲು ಅನುಕೂಲ ಆಗಲಿದೆ’ ಎಂದರು.

‘ರಾಮಗಿರಿ ಹೋಬಳಿ ಬರಪೀಡಿತ ಪ್ರದೇಶವಾಗಿದ್ದು, ತಾಳಿಕಟ್ಟೆ, ರಾಮಗಿರಿ, ಹನುಮಲಿ ಸುತ್ತಲಿನ ಕೆರೆಗಳಿಗೆ ಭದ್ರಾ ನೀರು ತುಂಬಿಸಲಾಗುವುದು. ಹನುಮಲಿ ಕೆರೆ ಏರಿ ಇಕ್ಕಟ್ಟಾಗಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಆಗುತ್ತಿತ್ತು. ಈಗ ಏರಿಯನ್ನು ದ್ವಿಮುಖ ರಸ್ತೆಯಾಗಿ ವಿಸ್ತರಿಸಲಾಗಿದೆ’ ಎಂದು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಕುಮಾರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಗಂಗಾಧರ್, ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಹಳ್ಳಪ್ಪ, ನುಲೇನೂರು ಶೇಖರಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಣ್, ಕೆಂಚಪ್ಪ, ಲೋಕೇಶ್, ಮಂಜಪ್ಪ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-44-1098753533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.