ಹೊಳಲ್ಕೆರೆ: ತಾಲ್ಲೂಕಿನ ಮದ್ದೇರು ಗ್ರಾಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜೈ ಭೀಮ್ ಸರ್ಕಲ್ ಉದ್ಘಾಟಿಸಲಾಯಿತು.

‘ಗ್ರಾಮದಲ್ಲಿ ಪ್ರತಿವರ್ಷ ಅಂಬೇಡ್ಕರ್ ಜಯಂತಿಯಂದು ಒಂದಲ್ಲ ಒಂದು ವಿಶೇಷ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಗ್ರಾಮದ ಯುವಕರು ಉತ್ಸಾಹಿಗಳಾಗಿದ್ದು, ಮಾದರಿ ಗ್ರಾಮವನ್ನಾಗಿ ಮಾಡಲು ಮುಂದಾಗಬೇಕು’ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಕೆಂಗುಂಟೆ ಜಯಣ್ಣ ಸಲಹೆ ನೀಡಿದರು.

ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು. 1 ರಿಂದ 7ನೇ ತರಗತಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ದಸಂಸ ತಾಲ್ಲೂಕು ಘಟಕದ ಸಂಚಾಲಕ ಸುಂದರಮೂರ್ತಿ, ಪ್ರಭಾಕರ್, ನವೀನ್ ಮದ್ದೇರು, ಮಂಜುನಾಥ್, ಅಶೋಕ್, ಸ್ವಾಮಿ, ಮಧು, ತಿಪ್ಪೇಸ್ವಾಮಿ, ಶೇಖರಪ್ಪ, ನಾಗರಾಜ್, ಹೇಮಂತ್, ಕಲ್ಲೇಶ್, ರಘು, ಮನು, ಶಿವು, ಕರಿಬಸಪ್ಪ, ಜಯಪ್ಪ, ರಂಗಪ್ಪ, ಕಲ್ಲಪ್ಪ, ಹನುಮಂತಪ್ಪ, ರುದ್ರಪ್ಪ, ಮಂಜು, ಪ್ರದೀಪ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-44-1973628448

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.