ಸಿರಿಗೆರೆ: ‘ಹೊಳಲ್ಕೆರೆ ಕ್ಷೇತ್ರದ ಎಲ್ಲಾ ಸಮುದಾಯದ ಜನರ ಗೌರವಯುತ ಬದುಕು ನನಗೆ ಮುಖ್ಯ’ ಎಂದು ಶಾಸಕ ಎಂ. ಚಂದ್ರಪ್ಪ ತಿಳಿಸಿದರು.

ಭರಮಸಾಗರ ಸಮೀಪದ ಚೌಲಿಹಳ್ಳಿ ಗ್ರಾಮದಲ್ಲಿ ₹ 1.25 ಕೋಟಿ ವೆಚ್ಚದ ನೂತನ ಚೆಕ್ಡ್ಯಾಂ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕ್ಷೇತ್ರದಾದ್ಯಂತ ಎಲ್ಲೆಡೆ ಅಭಿವೃದ್ಧಿ ಪರ ಕೆಲಸಗಳು ಆಗಿವೆ. ಸಿ.ಸಿ. ರಸ್ತೆ, ವಿದ್ಯುತ್, ಕುಡಿಯುವ ನೀರು, ಕೆರೆಕಟ್ಟೆಗಳ ದುರಸ್ಥಿ, ಶಾಲಾ– ಕಾಲೇಜು ಕಟ್ಟಡಗಳ ನಿರ್ಮಾಣ, ತರಗತಿ ಕೊಠಡಿಗಳ ಅಭಿವೃದ್ಧಿ, ಆಸ್ಪತ್ರೆಗಳ ಅಭಿವೃದ್ಧಿ ಕಾರ್ಯಗಳಾಗಿವೆ ಎಂದು ತಿಳಿಸಿದರು.

‘ಬಡವರ ಮಕ್ಕಳಿಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಸಿಗಲಿ ಎನ್ನುವ ಉದ್ದೇಶದಿಂದ ತಾಲ್ಲೂಕಿನಾದ್ಯಂತ ಹದಿಮೂರು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರು ಮಾಡಿಸಿದ್ದೇನೆ. ಬೆಳಿಗ್ಗೆ ಮನೆ ಬಾಗಿಲಿಗೆ ಹೋಗಿ ಮಕ್ಕಳನ್ನು ಕರೆತಂದು ಸಂಜೆ ಸುರಕ್ಷಿತವಾಗಿ ಮನೆಗೆ ತಲುಪಿಸಲು ನನ್ನ ಅನುದಾನದಲ್ಲಿ ಬಸ್ಗಳನ್ನು ಬಿಟ್ಟಿದ್ದೇನೆ’ ಎಂದರು.

‘ಕಾರ್ಯಕರ್ತರ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಶಾಸಕ ಚಂದ್ರಪ್ಪ ಅವರಲ್ಲಿ ಹುಡುಕಿ ಹುಡುಕಿ ಕೆಲಸ ಮಾಡುವ ಜಾಣ್ಮೆಯಿದೆ. ಹಿಂದಿನ ಶಾಸಕರು ಕೆಲಸ ಮಾಡಿದ್ದಾರೆ. ಆದರೆ, ಚಂದ್ರಣ್ಣನವರು ಮಾಡಿರುವ ಅಭಿವೃದ್ಧಿ ಕೆಲಸಗಳು ಕ್ಷೇತ್ರದ ಮತದಾರರ ಮನದಲ್ಲಿ ಅಚ್ಚಳಿಯದೆ ಉಳಿದಿದೆ’ ಎಂದು ಕಾಂಗ್ರೆಸ್ ಮುಖಂಡ ನಾಗೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.

ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ. ಬಸವರಾಜ್, ಬಿಜೆಪಿ ಉಪಾಧ್ಯಕ್ಷ ಶೈಲೇಶ್ಕುಮಾರ್, ಮಂಜುನಾಥ, ಡಿ.ಎಸ್. ಪ್ರವೀಣ್ಕುಮಾರ್, ಕಲ್ಲೇಶ್, ಶಿವಣ್ಣ, ನಾಗೇಂದ್ರಣ್ಣ, ಶೇಖರಣ್ಣ, ಕಲ್ಲಣ್ಣ, ಬಸವರಾಜ್, ರಾಜಣ್ಣ, ಕೊಟ್ರೇಶ್, ತಿಪ್ಪೇಶ್ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-44-683283162

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.