ಹೊಳಲ್ಕೆರೆ: ತಾಲ್ಲೂಕಿನ ಅಪ್ಪರಸನ ಹಳ್ಳಿಯಲ್ಲಿರುವ ಗೋಮಾಳವನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಗುರುವಾರ ಉಪ ತಹಶೀಲ್ದಾರ್ ಡಿ.ಟಿ.ಅಶೋಕ್ ಅವರಿಗೆ ಮನವಿ ಸಲ್ಲಿಸಿದರು.

‘ಅಪ್ಪರಸನಹಳ್ಳಿಯಲ್ಲಿ 11.37 ಎಕರೆ ಗೋಮಾಳವಿದ್ದು, ಅದರಲ್ಲಿ 2 ಎಕರೆಯನ್ನು ಚಿಕ್ಕ ಎಮ್ಮಿಗನೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎ.ಓಬಪ್ಪ ತನ್ನ ಸಹೋದರಿಯ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಅಲ್ಲದೇ ಈ ಜಮೀನನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಗ್ರಾಮ ಲೆಕ್ಕಾಧಿಕಾರಿಯನ್ನು ಕೇಳಿದರೆ ಸ್ಮಶಾನ ಭೂಮಿಯ ಅಭಿವೃದ್ಧಿ ಮಾಡಲಾಗುತ್ತಿದೆ ಎಂಬ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಪಿಡಿಒ ಕೂಡ ಜಮೀನಿನ ಅಭಿವೃದ್ಧಿ ಮಾಡಲಾಗುತ್ತಿಲ್ಲ ಎಂದು ಹೇಳುತ್ತಾರೆ. ಆದರೆ, ಜಾನುವಾರುಗಳಿಗೆ ಮೀಸಲಿಟ್ಟ ಗೋಮಾಳವನ್ನು ಖಾಸಗಿಯವರಿಗೆ ಹೇಗೆ ನೋಂದಣಿ ಮಾಡಿಕೊಟ್ಟಿದ್ದಾರೆ’ ಎಂದು ಕಾರ್ಯಕರ್ತರು ಪ್ರಶ್ನಿಸಿದರು.

‘ಈ ಬಗ್ಗೆ ತಾಲ್ಲೂಕು ಆಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ, ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿಲ್ಲ. ಗೋಮಾಳದ ಜಾಗವನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡಿದ್ದರೆ ಸರ್ಕಾರ ವಾಪಸ್ ಪಡೆಯಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಕೆಆರ್ಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಆನಂದ, ರಮೇಶ್, ದೇವರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-44-1494451078

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.