ಹೊಸದುರ್ಗ: ‘ತಾಲ್ಲೂಕಿನಾದ್ಯಂತ ವಿವಿಧೆಡೆ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಶೀಘ್ರದಲ್ಲೇ ಭವನ ನಿರ್ಮಾಣ ಮಾಡಲಾಗುವುದು’ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಭರವಸೆ ನೀಡಿದರು.

ತಾಲ್ಲೂಕಿನ ಬೆಲಗೂರು, ಲಕ್ಕಿಹಳ್ಳಿ, ದುಗ್ಗಾವರ, ಹೊನ್ನೇನಹಳ್ಳಿ, ಮೆಣಸಿನಡು ಗ್ರಾಮದಲ್ಲಿ ₹ 2.50 ಕೋಟಿ ವೆಚ್ಚದ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಭವನದ ನಿರ್ಮಾಣದಿಂದಾಗಿ ಕಾಲೊನಿ ಜನರಿಗೆ ಶುಭ ಸಮಾರಂಭಗಳ ಆಚರಣೆಗೆ ಅನುಕೂಲವಾಗಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ಲಕ್ಕಿಹಳ್ಳಿ ಮುದ್ದಣ್ಣ, ಶ್ರೀರಾಂಪುರ ರಾಜಣ್ಣ, ನಾಯಿಗೆರೆ ತಿಪ್ಪೇಸ್ವಾಮಿ ಸೇರಿದಂತೆ ಆಯಾ ಗ್ರಾಮಗಳ ಪಿಡಿಒ, ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-44-957943432

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.