ಹೊಸದುರ್ಗ: ‘ಅಂಬೇಡ್ಕರ್ ಜಯಂತಿ ನಾಡಿನ ಪ್ರತಿ ಮನೆಯ ಹಬ್ಬವಾಗಬೇಕು. ಸಂವಿಧಾನದಿಂದ ಎಲ್ಲಾ ಜಾತಿ ವರ್ಗಗಳು ಕೂಡಿ ಬದುಕು ಕಟ್ಟಿಕೊಳ್ಳುತ್ತಿದ್ದೇವೆ. ಸಂವಿಧಾನ ಇಲ್ಲದಿದ್ದರೆ, ನಮ್ಮ ಬದುಕನ್ನು ಊಹಿಸಲೂ ಸಾಧ್ಯವಿಲ್ಲ’ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಪುರಸಭೆ ವತಿಯಿಂದ ಪಟ್ಟಣದ ಅಶೋಕ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಹಶೀಲ್ದಾರ್ ತಿರುಪತಿ ಪಾಟೀಲ್, ಮುಖಂಡರಾದ ಡಿ.ಪರಶುರಾಮಪ್ಪ ಹಾಗೂ ಹೆಗ್ಗೆರೆ ಶಂಕರಪ್ಪ ಉಪನ್ಯಾಸ ನೀಡಿದರು.

ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆಯೂ ಪಟ್ಟಣದ ವೀರಭದ್ರೇಶ್ವರ ಸ್ವಾಮಿ ದೇವಾಲಯದಿಂದ ಟಿ.ಬಿ. ವೃತ್ತದವರೆಗೂ ಸಾಗಿತು. ಅಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅಶೋಕ ರಂಗಮಂದಿರದವರೆಗೂ ಸಾಗಿತು. ಈ ವೇಳೆ ತಾ.ಪಂ. ಇಒ ಸುನೀಲ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ನಾಗಭೂಷಣ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಗೋಪಾಲಪ್ಪ ಎನ್., ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಮಹಮ್ಮದ್ ಇಸ್ಮಾಯಿಲ್, ಮಾದಿಗ ನೌಕರರ ಸಂಘದ ಅಧ್ಯಕ್ಷ ಮೂರ್ತಪ್ಪ, ಮುಖಂಡರಾದ ಆರ್. ರಾಜಪ್ಪ, ದೊಡ್ಡಘಟ್ಟ ಲಕ್ಷ್ಮಣ್, ನಾಕಿಕೆರೆ ತಿಪ್ಪೇಸ್ವಾಮಿ, ಲಕ್ಕಿಹಳ್ಳಿ ಮುದ್ದಣ್ಣ, ಧನಂಜಯ ಮೆಂಗಸಂದ್ರ, ಶ್ರೀರಾಂಪುರದ ದಾಸಪ್ಪ, ದೇವಿಗೆರೆ ಮಲ್ಲಿಕಾರ್ಜುನ್, ಹೆಗ್ಗೆರೆ ಶಂಕ್ರಪ್ಪ, ಜೋಡಿ ಶ್ರೀರಂಗಾಪುರದ ತಿಮ್ಮಣ್ಣ, ದೊಡ್ಡಘಟ್ಟ ತಿಮ್ಮಯ್ಯ, ಮಾದಿಗ ಸಮಾಜದ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-44-548154800

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.