ಹೊಸದುರ್ಗ: ತಾಲ್ಲೂಕಿನ ಆನಿವಾಳ ಗ್ರಾಮದಲ್ಲಿ ಏ. 27ರಿಂದ ಎರಡು ದಿನ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಏ. 28ರಂದು ಗುರುಕಲ್ಲೇಶ್ವರ ಸ್ವಾಮಿ ಹಾಗೂ ವೀರಭದ್ರೇಶ್ವರ ಸ್ವಾಮಿಯ ಕೆಂಡದಾರ್ಚನೆ ನಡೆಯಲಿದೆ.

ಮಹಾರುದ್ರಸ್ವಾಮಿ ನೂತನ ದೇವಾಲಯದ ಮೂರನೇ ವಾರ್ಷಿಕ ಮಹೋತ್ಸವದ ಅಂಗವಾಗಿ ಏ. 27ರಂದು ಬೆಳಿಗ್ಗೆ 6ಕ್ಕೆ ಸ್ವಾಮಿಗೆ ರುದ್ರಾಭಿಷೇಕ ಮತ್ತು ಮಹಾಮಂಗಳಾರತಿ ನಡೆಯಲಿದೆ. ಸಂಜೆ 6.30ಕ್ಕೆ ವೀರಭದ್ರೇಶ್ವರ ಸ್ವಾಮಿಯ ಅಡ್ಡಪಲ್ಲಕ್ಕಿ ಉತ್ಸವ ಮತ್ತು ಹೂವಿನ ಉತ್ಸವ ರಾಜಬೀದಿಯಲ್ಲಿ ನಡೆಯಲಿದೆ.

ಏ. 28ರಂದು ಬೆಳಿಗ್ಗೆ 5ಕ್ಕೆ ಗಂಗಾಪೂಜೆ, ನಡೆಮುಡಿ ಉತ್ಸವ, ಬೆಳಿಗ್ಗೆ 8.30ಕ್ಕೆ ವೀರಭದ್ರೇಶ್ವರ ಸ್ವಾಮಿಯ ಕೆಂಡದಾರ್ಚನೆ ನಡೆಯಲಿದೆ. ಬಳಿಕ ದೇವರನ್ನು ಕರೆದೊಯ್ಯಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಬೇಕೆಂದು ದೇವಾಲಯ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-44-1430408512

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.