ಹೊಸದುರ್ಗ: ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ಬೆಲಗೂರು ಗ್ರಾಮದಲ್ಲಿ ಗುರುವಾರ ಅವಧೂತ ಬಿಂದು ಮಾಧವ ಶರ್ಮಾ ಸ್ವಾಮೀಜಿ ಅವರ ಜಯಂತ್ಯುತ್ಸವ ಸಮಾರಂಭ ನಡೆಯಿತು.

ಬೆಳಿಗ್ಗೆ ಮಠದ ಆವರಣದಲ್ಲಿ ಲಲಿತೋಪಾಖ್ಯಾನ ಪಾರಾಯಣ, ಬಿಂದು ಮಾಧವ ಶರ್ಮಾ ಸ್ವಾಮೀಜಿ ಸನ್ನಿಧಿಯಲ್ಲಿ ಮಹಾಪೂಜೆ ನಡೆಯಿತು.

ಗುರುಗಳ ಮೂರ್ತಿ ಹಾಗೂ ಪಾದುಕೆಗಳಿಗೆ ಅಭಿಷೇಕ ನೆರವೇರಿಸಲಾಯಿತು. ಮಧ್ಯಾಹ್ನ ಲಲಿತಾ ಹೋಮ, ಸಂಜೆ 6ಕ್ಕೆ ಸ್ವಾಮೀಜಿ ಭಾವಚಿತ್ರದ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು.

ನಂತರ ಸಾಮೂಹಿಕವಾಗಿ ವಿಷ್ಣು ಸಹಸ್ರನಾಮ ಪಾರಾಯಣ ಜರುಗಿತು. ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಮಾರುತಿ ಗುರುಪೀಠದ ಮಾರುತಿ ಶರ್ಮಾ ಸ್ವಾಮೀಜಿ ನೇತೃತ್ವದಲ್ಲಿ ನಡೆದವು. ಸಾವಿರಾರು ಭಕ್ತರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-44-390751259

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.