ಹೊಸದುರ್ಗ: ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ವರ್ಷಗಳೇ ಆಗಿವೆ. ಚರಂಡಿ ಸ್ವಚ್ಛತೆಯಿಲ್ಲ. ಬೀದಿ ದೀಪಗಳ ನಿರ್ವಹಣೆಯಿಲ್ಲ. ಗ್ರಾಮಗಳ ನೈರ್ಮಲೀಕರಣಕ್ಕೆ ಯಾವುದೇ ಆದ್ಯತೆ ನೀಡಿಲ್ಲ. ಹೀಗಿರುವಾಗ ತೆರಿಗೆ ವಸೂಲಿ ಮಾಡಲು ನಿಮಗೆ ಯಾವ ನೈತಿಕತೆ ಇದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ತಾಲ್ಲೂಕು ಪಂಚಾಯಿತಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

‘ತೆರಿಗೆ ವಸೂಲಾತಿಯಲ್ಲಿ ಮುಂದಿರುವುದಾಗಿ ಹೇಳಿಕೆ ನೀಡಲಾಗಿದೆ. ಸೇವೆ ಮಾಡದೆ ತೆರಿಗೆ ವಸೂಲಾತಿ ಮಾಡುವುದು ಅಪರಾಧ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಬೇಕು. ಹಳ್ಳಿಗಳಲ್ಲಿ ಆರೋಗ್ಯ ತಪಾಸಣೆ ಆಗಬೇಕು. ಕೆಲಸಗಳು ಆಗಬೇಕು. ತಾಲ್ಲೂಕಿನ ಹಲವು ಪುಣ್ಯಕ್ಷೇತ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿಗೆ ಬಂದಿದ್ದು, ಭಕ್ತರಿಗೆ ಕುಡಿಯಲು ನೀರಿನ ಸೌಲಭ್ಯ ಇಲ್ಲದಂತಾಗಿದೆ. ಈ ಬಗ್ಗೆ ಯಾವುದೇ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುವುದಿಲ್ಲ. ಪಿಡಿಒಗಳು ತಾಲ್ಲೂಕು ಕಚೇರಿ ಬಿಟ್ಟು, ಗ್ರಾಮಗಳಿಗೆ ಬರಬೇಕು. ಯಾರೂ ಕೈಗೆ ಸಿಗುತ್ತಿಲ್ಲ. ತಾಲ್ಲೂಕು ಪಂಚಾಯಿತಿ ಇಒ ಸಹ ಹಳ್ಳಿಗಳಿಗೆ ಬಂದು ಭೇಟಿ ನೀಡುವುದಿಲ್ಲ. ತೆರಿಗೆ ವಸೂಲಾತಿಗೆ ಇರುವ ಆಸಕ್ತಿ ಸೇವೆ ಮಾಡಲು ಏಕಿಲ್ಲ’ ಎಂದು ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸಿದ್ಧವೀರಪ್ಪ ಆಕ್ರೋಶ ವ್ಯಕ್ತಪಡಿಸಿದರು.

‘ಈ ಹಿಂದೆ ಮನವಿ ಕೊಟ್ಟಾಗ ಪಿಡಿಒ ಇರಬೇಕು ಎಂದು ತಿಳಿಸಲಾಗಿತ್ತು. ಈಗ ಇಲ್ಲಿ ಪಿಡಿಒಗಳೇ ಇಲ್ಲ. ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸಮರ್ಪಕವಾಗಿಲ್ಲ. ಕಲುಷಿತ ನೀರಿನಿಂದ ಅನಾರೋಗ್ಯಕ್ಕೆ ತುತ್ತಾದರೆ ಯಾರು ಹೊಣೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪೇಶಪ್ಪ ಪ್ರಶ್ನಿಸಿದರು.

‘ತಾಲ್ಲೂಕಿನಾದ್ಯಂತ 185 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗುರುತಿಸಲಾಗಿದೆ. ಅದರಲ್ಲಿ 143 ಘಟಕಗಳು ಸುಗಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಉಳಿದ 52 ಘಟಕಗಳನ್ನು ಮುಂದಿನ ಒಂದು ವಾರದೊಳಗೆ ದುರಸ್ತಿ ಮಾಡಿಸಿ ಕೊಡಲಾಗುವುದು’ ಎಂದು ತಾ.ಪಂ. ಇಒ ಸುನೀಲ್ ಕುಮಾರ್ ಭರವಸೆ ನೀಡಿದರು.

ಪಟ್ಟಣದ ಕೆನರಾ ಬ್ಯಾಂಕಿನಿಂದ ಆರಂಭವಾದ ಪ್ರತಿಭಟನೆ ಬಸವೇಶ್ವರ ವೃತ್ತ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತಾ.ಪಂ ಕಚೇರಿ ತಲುಪಿತು.

ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಮಾಯಪ್ಪ, ತಾಲ್ಲೂಕು ಘಟಕದ ಕಾರ್ಯದರ್ಶಿ ನಿರಂಜನ ನಾಗತಿಹಳ್ಳಿ, ಸಹ ಕಾರ್ಯದರ್ಶಿ ವಿಜಯ್, ಸಂಘಟನಾ ಕಾರ್ಯದರ್ಶಿ ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ರಘು ನೀರಗುಂದ, ರೈತ ಮುಖಂಡರಾದ ಕುಮಾರ್, ಶಿವಣ್ಣ, ಸುರೇಶ್, ತೀರ್ಥಪ್ಪ ಸೇರಿದಂತೆ ರೈತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-44-1924989274

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.