ಹೊಸದುರ್ಗ: ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮತ್ತು ಜಿಲ್ಲೆಯ ಶಾಸಕರೊಂದಿಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ವಿಕಾಸಸೌಧದಲ್ಲಿ ಸಭೆ ನಡೆಸಿದರು.

‘ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ವಂಚಿತವಾಗಿದ್ದ ಕಸಬಾ ಹಾಗೂ ಮಾಡದಕೆರೆ ಹೋಬಳಿಯ ವಿವಿ ಸಾಗರ ಜಲಾಶಯದ ಹಿನ್ನೀರಿನ ಭಾಗಕ್ಕೆ ಏತ ನೀರಾವರಿ ಮೂಲಕ ನೀರು ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಟ್ಟಾಗ, ಅವರು ಸಮ್ಮತಿ ಸೂಚಿಸಿದ್ದು ಜೊತೆಗೆ ಡಿಪಿಆರ್ ಮಾಡಿಸಲು ಸೂಚಿಸಿದ್ದಾರೆ. ಅಭಿವೃದ್ಧಿಗಾಗಿ ಕಾಂಗ್ರೆಸ್ ಶಾಸಕರಿಗೆ ತಲಾ ₹ 50 ಕೋಟಿ ನೀಡುವುದಾಗಿ’ ಭರವಸೆ ನೀಡಿದ್ದಾರೆ’ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಸುದ್ದಿಗಾರರಿಗೆ ತಿಳಿಸಿದರು.

‘ತಾಲ್ಲೂಕಿನ ಹಿನ್ನೀರಿನ ಭಾಗದ ಲಕ್ಕಿಹಳ್ಳಿ, ಅತ್ತಿಮಗ್ಗೆ, ಹುಣವಿನಡು, ಮತ್ತೋಡು, ಗುಡ್ಡದನೇರಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರ ಸಮಸ್ಯೆಯನ್ನು ಪ್ರಸ್ತಾಪಿಸಲಾಗಿದ್ದು ಈ ಭಾಗದ 6 ಕೆರೆಗಳು ಹಾಗೂ 12 ಸಾವಿರ ಎಕರೆ ಕೃಷಿ ಭೂಮಿಗೆ ಏತ ನೀರಾವರಿ ಮೂಲಕ ನೀರು ಸಿಗಲಿದೆ’ ಎಂದು ಶಾಸಕರು ಹೇಳಿದರು.

‘ಕಳೆದ 2 ವರ್ಷಗಳ ಹಿಂದೆ ಕೋಡಿ ಬಿದ್ದಾಗ ಹೊಸದುರ್ಗ ಹಿರಿಯೂರು ರಸ್ತೆಯಲ್ಲಿ ರಸ್ತೆ ಹಾಳಾಗಿದ್ದರಿಂದ ಕೋಡಿ ನೀರು ಹರಿಯುವ ಜಾಗದಲ್ಲಿ ₹ 34 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ನಿರ್ಮಿಸಲು ಹಣ ಮಂಜೂರಾಗಿದೆ. ಅಲ್ಲದೆ ಹಿನ್ನೀರಿನ ಪ್ರದೇಶದ ಹಳ್ಳಿಗಳಲ್ಲಿ ಜಲಾಶಯ ಭರ್ತಿಯಾದಾಗ ಉಂಟಾಗಿದ್ದ ಹಾನಿ ಸರಿಪಡಿಸಲು ₹ 86 ಕೋಟಿ ವೆಚ್ಚದ ಯೋಜನೆ ಸಿದ್ಧಪಡಿಸಲಾಗಿದೆ ಇದಕ್ಕೂ ಹಣ ನೀಡಲು ಮುಖ್ಯಮಂತ್ರಿಗೆ ಒಪ್ಪಿಗೆ ಸೂಚಿಸಿದ್ದಾರೆ’ ಎಂದರು.

‘ವಿವಿ ಸಾಗರ ಜಲಾಶಯದ ಕೋಡಿಯಲ್ಲಿ ಕ್ರಸ್ಟ್ಗೇಟ್ ಅಳವಡಿಕೆಗೆ ಈಗಾಗಲೇ ಸಿದ್ಧತೆ ನಡೆಸಲಾಗಿದ್ದು ಶೀಘ್ರದಲ್ಲಿಯೇ ಕೆಲಸವೂ ಆರಂಭವಾಗಲಿದೆ. ಜಲಾಶಯದ ಹಿನ್ನಿರಿನ ಜನ ಪಕ್ಕದಲ್ಲಿಯೇ ನೀರು ಇದ್ದರೂ ಅದನ್ನು ಬಳಸಲು ಸಾಧ್ಯವಾಗದೆ ನೀರಿಗಾಗಿ ಪರದಾಡುವಂತಾಗಿದ್ದು ಈ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ’ ಎಂದು ಗೋವಿಂದಪ್ಪ ತಿಳಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.