ಹೊಸದುರ್ಗ: ತಾಲ್ಲೂಕಿನ ಮಾರಬಘಟ್ಟ ಗ್ರಾಮದ ತೋಟದ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ಚಿರತೆ ಓಡಾಡುತ್ತಿರುವ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

‘ಒಂದು ವಾರದಿಂದ ಆಗಾಗ ಜಮೀನಿನಲ್ಲಿ ಕಾಣ ಸಿಗುತ್ತಿದ್ದ ಚಿರತೆ, ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಚೆನ್ನಬಸಪ್ಪ ಅವರ ತೋಟದ ಮನೆಯ ಕಾಂಪೌಂಡ್ ದಾಟಿ ಬಾಗಿಲ ಬಳಿ ಬಂದಿದೆ. ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಇದನ್ನು ನೋಡಿ ಜೋರಾಗಿ ಕೂಗಾಟ ಆರಂಭಿಸಿದ್ದಾರೆ. ಆಗ ಓಡಿ ಹೋಗಿದೆ. ಒಂದು ವಾರದಿಂದ ಎರಡು ಚಿರತೆಗಳು ಆಗಾಗ ಕಾಣಸಿಕ್ಕಿವೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದೆ’ ಎಂದು ಗ್ರಾಮದ ತಿಮ್ಮೇಶ್ ತಿಳಿಸಿದರು.

‘ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಆಗಿರುವ ಬಗ್ಗೆ ಮಾಹಿತಿ ಬಂದಿದ್ದು, ಸ್ಥಳ ಪರಿಶೀಲನೆ ನಡೆಸಲಾಗಿದೆ. ಅದರ ಸೆರೆಗಾಗಿ ಶೀಘ್ರ ಬೋನ್ ಇರಿಸಲಾಗುವುದು’ ಎಂದು ವಲಯ ಅರಣ್ಯಾಧಿಕಾರಿ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-44-1289342864

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.