ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸದುರ್ಗದ ಪುರಸಭೆ: ನಗದುರಹಿತ ಆಡಳಿತದಲ್ಲಿ ರಾಜ್ಯಕ್ಕೆ ಪ್ರಥಮ

Last Updated 25 ಡಿಸೆಂಬರ್ 2020, 20:36 IST
ಅಕ್ಷರ ಗಾತ್ರ

ಹೊಸದುರ್ಗ: ನಗದುರಹಿತ (cash less) ಆಡಳಿತ ವ್ಯವಸ್ಥೆಯಲ್ಲಿ ಪಟ್ಟಣದ ಪುರಸಭೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.

ಸರ್ಕಾರದ ವಿವಿಧ ಇಲಾಖೆ ಹಾಗೂ ವಲಯಗಳಲ್ಲಿ ನಗದುರಹಿತ ಹೊಸ ಪದ್ಧತಿ ಅಳವಡಿಸಿಕೊಂಡು ಆಡಳಿತ ನಡೆಸುತ್ತಿರುವುದನ್ನು ಗುರುತಿಸಿ 2020ನೇ ಸಾಲಿನ ಸೆಮಿಫೈನಲ್‌ನಲ್ಲಿ ದೆಹಲಿಯ ಸ್ಕೊಚ್‌(skoch) ಗ್ರೂಪ್‌ನವರು ಇಲ್ಲಿನ ಪುರಸಭೆಗೆ ಪ್ರಥಮ ಸ್ಥಾನ ನೀಡಿದ್ದಾರೆ.

ಪೌರಾಡಳಿತ ನಿರ್ದೇಶನಾಲಯ ಹಾಗೂ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ನಗದುರಹಿತ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಪಟ್ಟಣದ ನಾಗರಿಕರು ಪುರಸಭೆಗೆ ಸಂದಾಯ ಮಾಡಬೇಕಾದ ಆಸ್ತಿ ತೆರಿಗೆ, ನೀರಿನ ಶುಲ್ಕ, ವ್ಯಾಪಾರ ಪರವಾನಗಿ ಸೇರಿ ಇನ್ನಿತರ ಶುಲ್ಕವನ್ನು ನೇರವಾಗಿ ನೆಟ್‌ ಬ್ಯಾಂಕಿಂಗ್‌, ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ಗೂಗಲ್‌ ಪೇ, ಫೋನ್‌ ಪೇ, ಬಿಎಚ್‌ಐಎಂ ಆ್ಯಪ್‌, ಆರ್‌ಟಿಜಿಎಸ್‌, ನೆಫ್ಟ್‌ ಮೂಲಕ ಆನ್‌ಲೈನ್‌ ಪೇಮೆಂಟ್‌ (ನಗದುರಹಿತ) ಮಾಡುವ ವ್ಯವಸ್ಥೆ ಕಲ್ಪಿಸಲಾಗಿತ್ತು.

23 ವಾರ್ಡ್‌, 7,000 ಮನೆ ಹಾಗೂ 30 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಈ ಪುರಸಭೆಯು ಸ್ವಚ್ಛ ಸರ್ವೇಕ್ಷಣೆಯಲ್ಲಿ ದಕ್ಷಿಣ ಭಾರತದ 8 ರಾಜ್ಯಗಳಲ್ಲಿ ಪ್ರಥಮ ಸ್ಥಾನ ಗಳಿಸಿತ್ತು. ಈ ಹಿರಿಮೆಗೆ ಮತ್ತೊಂದು ಗರಿಯಾಗಿ ನಗದು ರಹಿತ ಆಡಳಿತ ನಿರ್ವಹಣೆಯಲ್ಲಿಯೂ ಪ್ರಥಮ ಸ್ಥಾನ ಗಳಿಸಿದೆ.

**

ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ನಗದು ರಹಿತ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದರಿಂದ ಪ್ರಶಸ್ತಿ ಲಭಿಸಿದೆ.
-ಡಿ.ಉಮೇಶ್‌, ಮುಖ್ಯಾಧಿಕಾರಿ ಪುರಸಭೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT