ಹೊಸದುರ್ಗ: ಪಟ್ಟಣದ ಹೊಳಲ್ಕೆರೆ ರಸ್ತೆಯಲ್ಲಿನ ಸಿದ್ಧಪ್ಪನ ಬೆಟ್ಟದಲ್ಲಿ ನೆಲೆಸಿರುವ ಸಿದ್ದೇಶ್ವರ ಸ್ವಾಮಿ ದೇವಾಲಯದಲ್ಲಿ ಎರಡು ದಿನಗಳ ಕಾಲ ಶಿವರಾತ್ರಿ ಆಚರಣೆ ನಡೆಯಲಿದೆ. ಬುಧವಾರ ನೂರಾರು ಜನರು ಸ್ವಾಮಿಯ ದರ್ಶನ ಪಡೆದರು.

ಬುಧವಾರ ಬೆಳಿಗ್ಗೆ 8 ಗಂಟೆಯಿಂದ ಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ ನಡೆಯಿತು. ಮಹಾಮಂಗಳಾರತಿ ನಂತರ ಅನ್ನದಾಸೋಹಕ್ಕೆ ಚಾಲನೆ ನೀಡಲಾಯಿತು. ಮತ್ತೊಂದೆಡೆ ವೀರಗಾಸೆ ಪ್ರದರ್ಶನ, ಭಜನೆ, ಭಕ್ತಿಗೀತೆ ಗಾಯನ ಕಾರ್ಯಕ್ರಮಗಳು ನಡೆದವು. ರಾತ್ರಿ 11ಗಂಟೆಯಿಂದ ಕಂಗುವಳ್ಳಿ ರಾಜಪ್ಪ ಅವರು ಶಿವಪುರಾಣ ಕಥೆ ಹೇಳಿದರು.

ಗುರುವಾರ ಬೆಳಿಗ್ಗೆ 6 ಗಂಟೆಗೆ ಸಿದ್ದೇಶ್ವರ ಸ್ವಾಮಿಗೆ ರುದ್ರಾಭಿಷೇಕ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.