ಹೊಸದುರ್ಗ: ತಾಲ್ಲೂಕಿನ ಪೀಲಾಪುರ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿವೆ. ಅವುಗಳಲ್ಲಿನ ತ್ಯಾಜ್ಯ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಗ್ರಾಮಸ್ಥರಿಗೆ ಅನಾರೋಗ್ಯದ ಭೀತಿ ಕಾಡುತ್ತಿದೆ.

‘ಗ್ರಾಮದ ಚರಂಡಿಗಳು ಸ್ವಚ್ಛತೆ ಕಾಣದೆ ವರ್ಷಗಳೇ ಕಳೆದಿದ್ದು, ಮಳೆ ಬಂದರೆ ನೀರು ರಸ್ತೆ ತುಂಬೆಲ್ಲಾ ಹರಿಯುತ್ತದೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಸೊಳ್ಳೆ, ನೊಣ, ವಿಷ ಜಂತುಗಳ ಆವಾಸ ಸ್ಥಾನವಾಗಿದೆ. ಚರಂಡಿ ದುಸ್ಥಿತಿಯ ಬಗ್ಗೆ ಸಾಣೇಹಳ್ಳಿ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಗ್ರಾಮಸ್ಥರು ಆಗ್ರಹಿಸಿದರು.

‘ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ, ಚರಂಡಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಇಲ್ಲವಾದರೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು’ ಎಂದು ಪಿಡಿಒ ಲಿಂಗರಾಜು ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-44-64258414

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.