ಹೊಸದುರ್ಗ: ಈ ಬಾರಿ ರಾಗಿ ಮಾರಾಟ ಮಾಡಲು ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಖರೀದಿ ಮಾಡಲಾಗುವುದು. ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಲಾಗುತ್ತಿದೆ. ರೈತರಿಂದ ದೂರು ಬಾರದಂತೆ ಕೆಲಸ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಬಿ.ಜಿ ಗೋವಿಂದಪ್ಪ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಸರ್ಕಾರದ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

ಕನಿಷ್ಠ ಬೆಂಬಲ ಬೆಲೆಯಲ್ಲಿ ರಾಗಿ, ಸಾವೆ, ನವಣೆಯನ್ನು ಕ್ವಿಂಟಲ್ಗೆ ₹ 4.886 ದರದಲ್ಲಿ ರೈತರಿಂದ ಖರೀದಿಸಲು ಚಾಲನೆ ನೀಡಲಾಗಿದೆ. ತಾಲ್ಲೂಕಿನಾದ್ಯಂತ ಒಟ್ಟು 10,418 ರೈತರು ನೋಂದಣಿ ಮಾಡಿಕೊಂಡಿದ್ದು, 2.62 ಲಕ್ಷ ಕ್ವಿಂಟಾಲ್ ರಾಗಿ ಖರೀದಿ ಮಾಡಲಾಗುವುದು. ರೈತರಿಗೆ ಅನುಕೂಲವಾಗುವಂತೆ ಶ್ರೀರಾಂಪುರ ಎಪಿಎಂಸಿಯಲ್ಲಿ ರಾಗಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಸಾವೆ, ನವಣೆ ಖರೀದಿ ಕೇಂದ್ರ ಆರಂಭಿಸಲಾಗಿದೆ. ಒಟ್ಟು 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲಾಗುತ್ತಿದೆ. ₹ 3,000 ಕೋಟಿ ಹಣ ನೇರವಾಗಿ ರೈತರ ಖಾತೆಗೆ ಬರಲಿದೆ. ನಿಗಮದ ಪರೀಕ್ಷೆ ಬರೆದು ಉದ್ಯೋಗದ ನಿರೀಕ್ಷೆಯಲ್ಲಿರುವ 376 ಮಂದಿಯನ್ನು ಶೀಘ್ರದಲ್ಲಿ ನೇಮಕಾತಿ ಮಾಡಿಕೊಳ್ಳಲಿದ್ದೇವೆ. ಈ ಸಂಬಂಧ ನಿಗಮದ ಅಧ್ಯಕ್ಷರು ಹಣಕಾಸು ಇಲಾಖೆ ಒಪ್ಪಿಗೆ ಕೂಡ ಪಡೆದಿದ್ದಾರೆ ಎಂದು ಮಾಹಿತಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಪ್ರಧಾನ ವ್ಯವಸ್ಥಾಪಕ ಮಂಜುನಾಥ್ ಹೇಳಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಮ ಮಾನೆ, ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ರಾಗಿ ಶಿವಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕಾರೇಹಳ್ಳಿ ಬಸವರಾಜ್, ಮುಖಂಡರಾದ ಗೋ. ತಿಪ್ಪೇಶ್, ಆಗ್ರೋ ಶಿವಣ್ಣ ಸೇರಿದಂತೆ ಎಪಿಎಂಸಿ ಸಿಬ್ಬಂದಿ, ಖರೀದಿ ಅಧಿಕಾರಿಗಳು, ಮುಖಂಡರು ಹಾಗೂ ರೈತರಿದ್ದರು.

ಸಾವೆ ಖರೀದಿ ಕೇಂದ್ರ ಉದ್ಘಾಟನೆ ತಾಲ್ಲೂಕಿನ ಶ್ರೀರಾಂಪುರದಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕದಲ್ಲಿ ಮಂಗಳವಾರ ಸಾವೆ ಖರೀದಿ ಕೇಂದ್ರವನ್ನು ಉದ್ಘಾಟಿಸಲಾಯಿತು. ಪ್ರತಿ ಕ್ವಿಂಟಾಲ್ ಸಾವೆ ನವಣೆಗೆ ₹ 4886 ಹಾಗೂ ರಾಜ್ಯ ಸರ್ಕಾರದಿಂದ ₹ 114 ಸೇರಿ ಒಟ್ಟು ₹ 5000 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ತಾಲ್ಲೂಕಿನಲ್ಲಿ 1228 ರೈತರು ನೋಂದಣಿ ಮಾಡಿಸಿದ್ದು 34130 ಕ್ವಿಂಟಲ್ ಸಾವೆ ಖರೀದಿ ಮಾಡಲಾಗುವುದು. ಸರ್ಕಾರ ಬೆಂಬಲ ಬೆಲೆ ಘೋಷಿಸಿದ್ದರಿಂದ ಮಾರುಕಟ್ಟೆಗಳಲ್ಲಿ ಸಾವೆ ಬೆಳೆಗೆ ಕ್ವಿಂಟಾಲ್ಗೆ ₹ 4700 ವರೆಗೆ ಬೆಲೆ ಏರಿಕೆಯಾಯಿತು. ಮುಂದಿನ ವರ್ಷ ಆದಷ್ಟು ಬೇಗನೆ ಖರೀದಿ ಪ್ರಕ್ರಿಯೆ ನೆಡೆಯಿಸಲಾಗುವುದು. ಸಿರಿಧಾನ್ಯಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇದ್ದು ರೈತರು ಯಾವುದೇ ಆತಂಕವಿಲ್ಲದೆ ಖರೀದಿ ಕೇಂದ್ರದಲ್ಲಿ ಸಾವೆ ಮಾರಾಟ ಮಾಡಿ ಹೆಚ್ಚಿನ ಲಾಭಗಳಿಸಬಹುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.