ಹೊಸದುರ್ಗ: ತಾಲ್ಲೂಕಿನ ಅಂಚಿಬಾರಿಹಟ್ಟಿಯಲ್ಲಿ (ವಿವಿ ಸಾಗರದ ಕೋಡಿ ಸಮೀಪ) ನೆಲೆಸಿರುವ ಹಾರನಕಣಿವೆ ರಂಗನಾಥ ಸ್ವಾಮಿ ನೂತನ ದೇವಾಲಯದ ಪ್ರಾರಂಭೋತ್ಸವ, ಕಳಸ ಸ್ಥಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಶುಕ್ರವಾರ ಬೆಳಿಗ್ಗೆ ರಂಗನಾಥಸ್ವಾಮಿಗೆ ವಿಶೇಷ ಅಭಿಷೇಕ, ಪೂಜೆ, ಅಲಂಕಾರ ಹಾಗೂ ಮಹಾಮಂಗಳಾರತಿ ನಡೆಯಿತು. ನಂತರ ರಂಗನಾಥ ಸ್ವಾಮಿ ಸೇರಿದಂತೆ ಸುತ್ತಮುತ್ತಲಿನ 20ಕ್ಕೂ ಅಧಿಕ ಗ್ರಾಮಗಳಿಂದ ಆಗಮಿಸಿದ ದೇವರುಗಳ ಸಮ್ಮುಖದಲ್ಲಿ ಕಳಸ ಪೂಜಾ ಕಾರ್ಯ ನೆರವೇರಿತು. ನಂತರ ಸಕಲ ವಾದ್ಯಗೋಷ್ಠಿಗಳು ಹಾಗೂ ಜಯಘೋಷಗಳ ಸಮ್ಮುಖದಲ್ಲಿ ದೇವಾಲಯದ ಗೋಪುರದಲ್ಲಿ ಕಳಸ ಪ್ರತಿಷ್ಠಾಪಿಸಲಾಯಿತು

ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. 20ಕ್ಕೂ ಅಧಿಕ ದೇವರುಗಳಿಗೆ ಮಡಿಲಕ್ಕಿ ನೀಡಿ ಬೀಳ್ಕೊಡುಗೆ ನೀಡಲಾಯಿತು. ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಂಡರು.

8 ಶತಮಾನಗಳ ಇತಿಹಾಸ ಹೊಂದಿರುವ ಹಾರನಕಣಿವೆ ರಂಗನಾಥ ಸ್ವಾಮಿ ದೇವಾಲಯವನ್ನು ಬುಡಕಟ್ಟು ಸಂಸ್ಕೃತಿ ಹಿನ್ನೆಲೆಯಲ್ಲಿ ₹ 3 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ದೇವಾಲಯದ ಸುತ್ತಲೂ ಮಹಾ ವಿಷ್ಣುವಿನ ಮೂರ್ತಿಗಳನ್ನು ಕೆತ್ತಿಸಲಾಗಿದೆ. ದೇವಾಲಯದ ಆರಂಭೋತ್ಸವದ ಅಂಗವಾಗಿ ವಿವಿಧ ಹೂವುಗಳಿಂದ ತೋರಣ ರೀತಿ ಅಲಂಕರಿಸಿದ್ದು, ನೋಡುಗರ ಭಕ್ತಿ ಭಾವ ಸೆಳೆಯುವಂತಿತ್ತು. ‘ಕಾರ್ಯಕ್ರಮಕ್ಕೆ ಹಿರಿಯೂರು, ತರೀಕೆರೆ, ಕಡೂರು, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ 20 ಸಾವಿರಕ್ಕೂ ಅಧಿಕ ಜನ ಸೇರಿದ್ದರು ಬಿಸಿಲಿನ ಬೇಗೆ ತಾಳದೆ ಭಕ್ತರು ನೆರಳನ್ನು ಆಶ್ರಯಿಸುತ್ತಿದ್ದರು. ದೇವಾಲಯದ ಆವರಣದಲ್ಲಿ ವಿಶೇಷ ಪುಷ್ಪಾಲಂಕಾರ, ವಿದ್ಯುತ್ ದೀಪಾಲಂಕಾರ, ದೇವರುಗಳ ನರ್ತನ, ಮತ್ತೊಂದೆಡೆ ಹೋಮ, ಹವನ, ಪೂಜೆ, ಪುನಸ್ಕಾರಗಳು ಒಟ್ಟಾರೆಯಾಗಿ ಕಳೆದ ಮೂರು ದಿನಗಳಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು ಎಂದು ಹಾರನಕಣಿವೆ ರಂಗನಾಥ ಸ್ವಾಮಿ ಟ್ರಸ್ಟ್ ಅಧ್ಯಕ್ಷ ವೈದ್ಯ ಆರ್. ರಂಗನಾಥ ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-44-1033147925

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.