ಹೊಸದುರ್ಗ: ‘ಸಾಣೇಹಳ್ಳಿ ಕೆರೆಯ ಹೂಳೆತ್ತುವ ಕಾರ್ಯವು ಭರದಿಂದ ಸಾಗಿದ್ದು, ಈಗಾಗಲೇ ಶೇ 90ರಷ್ಟು ಕೆಲಸ ಪೂರ್ಣಗೊಂಡಿದೆ. ಇನ್ನು ಒಂದು ವಾರದಲ್ಲಿ ಕಾರ್ಯ ಮುಕ್ತಾಯಗೊಳ್ಳಲಿದೆ’ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಬುಧವಾರ ಕೆರೆಗೆ ಭೇಟಿ ನೀಡಿ, ಹೂಳೆತ್ತುವ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ‘ಮಳೆರಾಯ ಕೃಪೆ ತೋರಿ ಆದಷ್ಟು ಬೇಗ ಕೆರೆ ತುಂಬುವಂತಾಗಲಿ. ಇದರಿಂದ ಅಂತರ್ಜಲ ಮಟ್ಟ ವೃದ್ಧಿಸಿ, ಈ ಭಾಗದ ರೈತರ ಬಾಳು ಹಸನಾಗಲಿ’ ಎಂದು ಆಶಿಸಿದರು.

‘ಕೆರೆಯ ಮಧ್ಯ ಭಾಗದಲ್ಲಿರುವ ಐತಿಹಾಸಿಕ ‘ದೇವ ಕನ್ನಿಕೆಯರ ಬಾವಿ’ಯು ಸದ್ಯ ಶಿಥಿಲಾವಸ್ಥೆಯಲ್ಲಿದೆ. ಈ ಪುರಾತನ ಬಾವಿಗೆ ಸೂಕ್ತ ಸಂಪರ್ಕ ಕಲ್ಪಿಸಲು ಹಾಗೂ ಅದನ್ನು ನವೀಕರಿಸಲು ತಕ್ಷಣವೇ ಮಾರ್ಗ ಮಾಡಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆಗ್ರಹಿಸಿದರು. ಬಾವಿಗೆ ಮಾರ್ಗ ಕಲ್ಪಿಸಲು ಆರ್ಥಿಕ ನೆರವನ್ನು ಸಾಣೇಹಳ್ಳಿ ಮಠದಿಂದಲೇ ಭರಿಸಲಾಗುವುದು’ ಎಂದು ತಿಳಿಸಿದರು.

‘ಈ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ಕೆ ಕೇವಲ ಸರ್ಕಾರ, ಮಠ ಮಾತ್ರವಲ್ಲದೆ, ಸ್ಥಳೀಯ ಯುವಶಕ್ತಿಯೂ ಕೈಜೋಡಿಸಬೇಕಿದೆ. ಸಾಣೇಹಳ್ಳಿಯ ಯುವಕರು ಸ್ವಯಂಪ್ರೇರಿತರಾಗಿ ಬಂದು ಕೆರೆಯ ಅಭಿವೃದ್ಧಿ ಕೆಲಸಗಳಲ್ಲಿ ಶ್ರಮದಾನ ಮಾಡಬೇಕು’ ಎಂದು ಸಲಹೆ ನೀಡಿದರು.

ಎಂಜಿನಿಯರ್ ಉಮೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-44-353236493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.