ಹೊಸದುರ್ಗ: ‘ಮಹನೀಯರ ಆದರ್ಶ ಹಾಗೂ ಮೌಲ್ಯಗಳ ಅರಿವನ್ನು ಮಕ್ಕಳಲ್ಲಿ ಮೂಡಿಸಬೇಕು. ಆಗ ಅವರು ದೇಶದ ಉತ್ತಮ ಪ್ರಜೆ ಆಗಲು ಸಾಧ್ಯ’ ಎಂದು ತಹಶೀಲ್ದಾರ್ ತಿರುಪತಿ ಪಾಟೀಲ್ ಹೇಳಿದರು.

ತಾಲ್ಲೂಕು ಆಡಳಿತ, ವಿವಿಧ ಇಲಾಖೆಗಳು ಹಾಗೂ ಉಪ್ಪಾರ ಸಮಾಜದ ವತಿಯಿಂದ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಮಹನೀಯರು ಸರ್ವ ಸಮಾಜಕ್ಕೂ ಮಾದರಿಯಾಗಿದ್ದಾರೆ. ತಮ್ಮ ಕಷ್ಟಗಳನ್ನು ಬದಿಗೊತ್ತಿ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅಂತಹವರನ್ನು ಒಂದು ಸಮಾಜಕ್ಕೆ ಮೀಸಲಿಡುವ ಸಂಕುಚಿತ ಮನೋಭಾವ ಬಿಡಿ. ಎಲ್ಲ ಸಮಾಜದವರು ಒಂದಾಗಿ ಜಯಂತಿ ಆಚರಿಸುವ ಕಾರ್ಯವಾಗಬೇಕು’ ಎಂದರು.

‘ಸಮುದಾಯದ ಅಭಿವೃದ್ಧಿಗೆ ಶಿಕ್ಷಣ, ಆರೋಗ್ಯ ಹಾಗೂ ಮೂಲ ಸೌಕರ್ಯಗಳು ಬೇಕು. ಆದಾಯಕ್ಕಿಂತ ಅಧಿಕ ಹಣವನ್ನು ಖಾಸಗಿ ಶಾಲೆಯಲ್ಲಿ ಶಿಕ್ಷಣಕ್ಕೆ ನೀಡಿದ್ದೇವೆ. ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀತಿ ಸರ್ಕಾರದಿಂದ ಇದ್ದರೂ ಪಾಲನೆ ಆಗುತ್ತಿಲ್ಲ. ಸಾರ್ವಜನಿಕ ಆಸ್ಪತ್ರೆ ಸೌಲಭ್ಯವಿದ್ದರೂ ಖಾಸಗಿ ಆಸ್ಪತ್ರೆಗೆ ತೆರಳಿ ಹಣ ವ್ಯಯಿಸಲಾಗುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಕಾರ್ಯವಾಗಬೇಕು’ ಎಂದು ಅಭಿಪ್ರಾಯಪಟ್ಟರು.

ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಕೆ. ಪರಪ್ಪ ಮಾತನಾಡಿದರು. ಭಗೀರಥ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್, ಭಗೀರಥ ಮಹಿಳಾ ಸಂಘದ ಅಧ್ಯಕ್ಷೆ ಭಾಗೀರಥಮ್ಮ, ಮುಖಂಡರಾದ ಕಾರೇಹಳ್ಳಿ ಬಸವರಾಜ್, ಕೊಂಡಾಪುರ ಮಂಜುನಾಥ್, ವಿಶಾಲಾಕ್ಷಿ ನಟರಾಜ್, ರವಿಕುಮಾರ್, ದೀಪಿಕಾ ಸತೀಶ್, ಆಗ್ರೋ ಶಿವಣ್ಣ, ಮಾವಿನಕಟ್ಟೆ ಗುರುಸ್ವಾಮಿ ಸೇರಿ ಉಪ್ಪಾರ ಸಂಘದ ನಿರ್ದೇಶಕರು, ಪದಾಧಿಕಾರಿಗಳು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-44-163413369

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.