ಹೊಸದುರ್ಗ: ಕ್ಷಯರೋಗದ (ಟಿ.ಬಿ) ನಿರ್ಮೂಲನೆ ಹಾಗೂ ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ವಿಶ್ವ ಕ್ಷಯರೋಗ ದಿನದ ಪ್ರಮುಖ ಉದ್ದೇಶವಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ರಾಘವೇಂದ್ರ ಪ್ರಸಾದ್ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಬೆಲಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಕ್ಷಯರೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕ್ಷಯರೋಗ ಬ್ಯಾಕ್ಟೀರಿಯಾದಿಂದ ಉಂಟಾಗುವ ಸಾಂಕ್ರಾಮಿಕ ರೋಗ. ಸಾಮಾನ್ಯವಾಗಿ ಇದು ಶ್ವಾಸಕೋಶ ಗಳಲ್ಲಿ ಕಂಡುಬರುತ್ತದೆ. ದೇಹದ ಇತರೆ ಅಂಗಗಳಿಗೂ ಹಬ್ಬುವ ಸಾಧ್ಯತೆ ಇರುತ್ತದೆ. ಟಿ.ಬಿ ರೋಗಿಯು ಕೆಮ್ಮುವಾಗ, ಸೀನುವಾಗ ಅಥವಾ ಮಾತನಾಡುವಾಗ ಗಾಳಿಯ ಮೂಲಕ ಇತರರಿಗೆ ಹರಡುತ್ತದೆ. ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ, ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.

ಬೆಲಗೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಸುಮಾ, ಸಹನಾ, ಕೃಪಾಕರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೀರೇಂದ್ರ ಪಾಟೀಲ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನಿರ್ಮಲಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್, ಆರೋಗ್ಯ ನಿರೀಕ್ಷಾಧಿಕಾರಿ ಅಲೀಂ ಪಾಷಾ, ಚಂದ್ರಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ವೀರೇಂದ್ರ ಪಾಟೀಲ್, ಲಲಿತಮ್ಮ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು ಹಾಗೂ ಸಾರ್ವಜನಿಕರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-44-1682366102

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.