ಹೊಸದುರ್ಗ: ತಾಲ್ಲೂಕಿನ ಕಾರೇಹಳ್ಳಿ ಸಮೀಪದ ಹರಿಹರೇಶ್ವರಸ್ವಾಮಿ ದೇವಸ್ಥಾನದ ಬಾಗಿಲಿಗೆ ಬೆಂಕಿಹಚ್ಚಿ, ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗೆ ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷ ಸಾದಾ ಶಿಕ್ಷೆ ಮತ್ತು ₹50,000 ದಂಡ ವಿಧಿಸಿ ತೀರ್ಪು ನೀಡಿದೆ.

2023ರ ಡಿಸೆಂಬರ್ನಲ್ಲಿ ಆರೋಪಿ ಖಲಂದರ್ ಸಾವೆಲ್ ಹುಂಡಿ ಕಳವು ಮಾಡಲು ಯತ್ನಿಸಿದ್ದ. ಅದು ಸಾಧ್ಯವಾಗದಿದ್ದಾಗ ದೇವಸ್ಥಾನದ ಮರದ ಬಾಗಿಲಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಅಂದಾಜು ₹50,000 ಮೌಲ್ಯದ ಬಾಗಿಲಿಗೆ ಹಾನಿಯಾಗಿತ್ತು.

ಈ ಕುರಿತು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಪಿ.ಬಿ.ಮಧು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರೋಣ ವಾಸುದೇವ್ ಅವರು ಶಿಕ್ಷೆ ಪ್ರಕಟಿಸಿದರು.

ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಎಸ್.ಎಸ್.ಮಲ್ಲಯ್ಯ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.